Tuesday, April 30, 2024
Homeಕರಾವಳಿಉಡುಪಿಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಗಿತ:ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಗಿತ:ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

spot_img
- Advertisement -
- Advertisement -

ಉಡುಪಿ: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಒಟ್ಟು ಹನ್ನೊಂದು ಡಯಾಲಿಸಿಸ್ ಯಂತ್ರಗಳ ಕಾರ್ಯ ನಿರ್ವಹಣೆ ಸ್ಥಗಿತಗೊಂಡಿದೆ ಎಂದು ಹೇಳಲಾಗಿದ್ದು, ಆಸ್ಪತ್ರೆಯ ಸರ್ಜನ್ ಜೊತೆ ಚರ್ಚೆ ನಡೆಸಿ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ಪಡೆದರು.

ನಂತರ ಆಸ್ಪತ್ರೆಯಿಂದಲೇ ಆರೋಗ್ಯ ಇಲಾಖೆಯ ಆಯುಕ್ತರಿಗೆ ದೂರವಾಣಿ ಕರೆ ಮಾಡಿದ ಶೋಭಾ ಕರಂದ್ಲಾಜೆ ಡಯಾಲಿಸಿಸ್ ಯಂತ್ರಗಳ ಕಾರ್ಯನಿರ್ವಹಣೆ ಸ್ಥಗಿತಗೊಂಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಡಯಾಲಿಸಿಸ್ ಯಂತ್ರಗಳು ಸಂಪೂರ್ಣ ಸ್ಥಗಿತವಾಗಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಆರೋಗ್ಯ ಇಲಾಖೆ ಆಯುಕ್ತರು ಉತ್ತರಿಸಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!