Thursday, June 4, 2026
Homeಕರಾವಳಿಬಂಟ್ವಾಳ; ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕ ಯುವತಿಯನ್ನು ಬಸ್ಸಿನಿಂದ ಇಳಿಸಿದ ಭಜರಂಗ ದಳ...

ಬಂಟ್ವಾಳ; ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕ ಯುವತಿಯನ್ನು ಬಸ್ಸಿನಿಂದ ಇಳಿಸಿದ ಭಜರಂಗ ದಳ ಕಾರ್ಯಕರ್ತರು

- Advertisement -
- Advertisement -

ಬಂಟ್ವಾಳ; ಖಾಸಗಿ ಬಸ್ ನಲ್ಲಿ ಜೊತೆಯಾಗಿ ಹೋಗುತ್ತಿದ್ದ ಅನ್ಯಕೋಮಿನ ಯುವಕ ಯುವತಿಯನ್ನು ಭಜರಂಗದಳದ ಕಾರ್ಯಕರ್ತರು ಬಸ್ ತಡೆದು ನಿಲ್ಲಿಸಿ ಇಳಿಸಿದ ಘಟನೆ ಕಲ್ಲಡ್ಕ ದಾಸಕೋಡಿಯಲ್ಲಿ ನಡೆದಿದೆ.

ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವಕ ಯುವತಿ ಜೊತೆಯಾಗಿದ್ದಾರೆಂದು ಭಜರಂಗದಳದ ಕಾರ್ಯಕರ್ತರು ದಾಸಕೋಡಿ ಬಳಿ ಬಸ್ ನಿಲ್ಲಿಸಿದ್ದಾರೆ.ಈ ವೇಳೆ  ಯುವತಿ ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ಬಂದ ಪೊಲೀಸರು ಯುವಕ,ಯುವತಿಯನ್ನು ಹಾಗೂ ಕಾರ್ಯಕರ್ತರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.ಬಳಿಕ ಯುವಕ,ಯುವತಿಯ‌ಪೋಷಕರನ್ನು ಕರೆಸಿ ಮಾತುಕತೆ ನಡೆಸಿ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!