Friday, January 27, 2023
Homeಕರಾವಳಿಅನ್ಯಕೋಮಿನ ಜೋಡಿಯನ್ನು ಹಿಡಿದ ಕಾರ್ಯಕರ್ತರು: ಧರ್ಮಸ್ಥಳ ಪೊಲೀಸ್ ಠಾಣೆಗೆ ಜಮಾಯಿಸಿದ ಹಿಂದೂ ಸಂಘಟನೆ

ಅನ್ಯಕೋಮಿನ ಜೋಡಿಯನ್ನು ಹಿಡಿದ ಕಾರ್ಯಕರ್ತರು: ಧರ್ಮಸ್ಥಳ ಪೊಲೀಸ್ ಠಾಣೆಗೆ ಜಮಾಯಿಸಿದ ಹಿಂದೂ ಸಂಘಟನೆ

- Advertisement -
- Advertisement -

ಬೆಳ್ತಂಗಡಿ : ರೂಂ ಮಾಡಲು ಹೋಗುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಅನುಮಾನ ಬಂದು ಹಿಂದೂ ಕಾರ್ಯಕರ್ತರು ಹಿಡಿದು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ ಘಟನೆ ಧರ್ಮಸ್ಥಳದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಖಾಸಗಿ ಲಾಡ್ಜ್ ಗಳಲ್ಲಿ ಐಡಿ ಕಾರ್ಡ್ ನೀಡಿ ರೂಂ ಪಡೆಯಲು ಯತ್ನಿಸುತ್ತಿದ್ದು ಆದ್ರೆ ಯಾವ ಲಾಡ್ಜ್ ಮಾಲೀಕರು ಕೂಡ ಅನ್ಯಕೋಮಿನ ಜೋಡಿ ಅಗಿದ್ದರಿಂದ ರೂಂ ನೀಡದೆ ವಾಪಸ್ ಕಳುಹಿಸಿದ್ದರು ಇದರ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಜ.25 ರಂದು ಬೆಳಗ್ಗೆ ಇಬ್ಬರನ್ನು ಹಿಡಿದು ವಿಚಾರಿಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬಳ್ಳಾರಿ ಜಿಲ್ಲೆಯ ದಾದಫೀರ್ ಮತ್ತು ವಿವಾಹಿತ ಮಹಿಳೆ ಉಮಾ ಎಂಬ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದು ಅದರಂತೆ ಪೋಷಕರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದು ಯಾವ ಕಾರಣಕ್ಕೆ ಧರ್ಮಸ್ಥಳಕ್ಕೆ ಬಂದಿರುವುದು ಎಂದು ವಿಚಾರಣೆ ನಡೆಸುತ್ತಿದ್ದಾರೆ.

ಅನ್ಯಕೋಮಿನ ವಿಚಾರದ ಮಾಹಿತಿ ತಿಳಿದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಿಂದೂ ಕಾರ್ಯಕರ್ತರು ಜಮಾಯಿಸುತ್ತಿದ್ದಾರೆ.

- Advertisement -
spot_img

Latest News

error: Content is protected !!