Friday, June 27, 2025
Homeಕರಾವಳಿಬೆಳ್ತಂಗಡಿ ಶಾಸಕರಿಂದ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ; ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆರೋಪ

ಬೆಳ್ತಂಗಡಿ ಶಾಸಕರಿಂದ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ; ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆರೋಪ

spot_img
- Advertisement -
- Advertisement -

ಬೆಂಗಳೂರು: ಬೆಳ್ತಂಗಡಿ ಪೊಲೀಸರಿಂದ ಬಿಜೆಪಿ ಯುವ ಮೋರ್ಛಾ ಮುಖಂಡನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ ತೋರಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜ ಧರಣಿ ನಡೆಸಿದ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ದಿನೇಶ್ ಗುಂಡೂರಾವ್,ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ ಬಿಜೆಪಿಯ ಯುವ ಮೋರ್ಛಾ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡರೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜ,ಅಕ್ರಮ ಲೂಟಿಕೋರರ ಪರ ನಿಂತು ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೇ, ಪೊಲೀಸರ ಮೇಲಿನ ಶಾಸಕ ಹರೀಶ್ ಪೂಂಜಾ ಅವರ ಈ ಗೂಂಡಾ ವರ್ತನೆ ಅಕ್ಷಮ್ಯ ಎಂದಿರುವ ಸಚಿವರು, ಸ್ವತಃ ಬಿಜೆಪಿ ಶಾಸಕರೇ ಮುಂದೆ ನಿಂತು ಸರ್ಕಾರಿ ಅಧಿಕಾರಿಗಳಿಗೆ ಕಾನೂನಾತ್ಮಕವಾಗಿ ಕೆಲಸ ಮಾಡಲು ಅಡ್ಡಿಪಡಿಸುವ ಈ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವೇಳೆ, ಶಾಸಕರಾಗಿ ಪೊಲೀಸರ ಕಾರ್ಯಕ್ಕೆ ಅಡ್ಡಿ ಪಡಿಸಿ ಈ ರೀತಿ ಗೂಂಡಾಗಿರಿ ತೋರಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಮಾಜ ಘಾತುಕರ ಪರ ನಿಂತು ಬಿಜೆಪಿ ಶಾಸಕರು ರಾಜಕಾರಣ ಮಾಡುತ್ತಿರುವುದು ಈ ಪ್ರಕರಣದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!