Friday, June 5, 2026
Homeತಾಜಾ ಸುದ್ದಿಲಂಚ ತೆಗೆದುಕೊಂಡವರು ರಶೀದಿ ಕೊಡ್ತಾರಾ? ಸಿಎಂಗೆ ತಿರುಗೇಟು ನೀಡಿದ ದಿಂಗಾಲೇಶ್ವರ ಶ್ರೀ

ಲಂಚ ತೆಗೆದುಕೊಂಡವರು ರಶೀದಿ ಕೊಡ್ತಾರಾ? ಸಿಎಂಗೆ ತಿರುಗೇಟು ನೀಡಿದ ದಿಂಗಾಲೇಶ್ವರ ಶ್ರೀ

- Advertisement -
- Advertisement -

ಗದಗ : ಪರ್ಸೆಂಟೆಜ್‌ ಬಗ್ಗೆ ದಾಖಲೆ ಕೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ದಿಂಗಾಲೇಶ್ವರ ಶ್ರೀ ತಿರುಗೇಟು ನೀಡಿದ್ದಾರೆ. ಮಠ, ಮಂದಿರಗಳಿಗೆ ದೇಣಿಗೆ ನೀಡಿದ್ರೆ, ಅಲ್ಲಿ ರಶೀದಿ ಕೊಡುತ್ತಾರೆ. ಆದ್ರೆ, ಲಂಚ ಪಡೆದ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ದೇಣಿಗೆ ಪಾವತಿ ನೀಡುತ್ತಾರಾ? ಎಂದು ಮರುಪ್ರಶ್ನೆ ಹಾಕಿದ್ದಾರೆ.

ಫಕೀರೇಶ್ವರ ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ‘ಮಠಕ್ಕೆ ಮಂಜೂರಾದ ₹75 ಲಕ್ಷ ಅನುದಾನದಲ್ಲಿ ಅಧಿಕಾರಿಗಳು ₹25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕಿಂತ ಹೆಚ್ಚಿನ ದಾಖಲೆಯ ಅವಶ್ಯಕತೆ ಇದೆಯೇ? ರಾಜ್ಯದಲ್ಲಿ ಮುಜರಾಯಿ ಇಲಾಖೆ ಹೊರತುಪಡಿಸಿದ್ರೆ, ಎಲ್ಲಾ ಇಲಾಖೆಗಳಲ್ಲಿ ಅನುದಾನ ತೆಗೆದುಕೊಳ್ಳಲು ಎಲ್ಲ ಮಠಾಧೀಶರು ಕಮಿಷನ್ ನೀಡಿದ್ದಾರೆ. ಅದನ್ನು ಬಹಿರಂಗವಾಗಿ ಹೇಳಿಕೊಳ್ಳಲು ಮುಂದಾಗುತ್ತಿಲ್ಲ. ಅವರನ್ನೆಲ್ಲಾ ಮಂಪರು ಪರೀಕ್ಷೆಗೆ ಒಳಪಡಿಸಿದ್ರೆ, ಸತ್ಯ ಹೊರಬರುತ್ತದೆ’ ಎಂದಿದ್ದಾರೆ.

- Advertisement -

Latest News

error: Content is protected !!