Saturday, May 18, 2024
Homeಕರಾವಳಿಉಡುಪಿಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಖಾಲಿ ಹುದ್ದೆಗಳಿಗೆ ಸೆ.15 ರಂದು ನೇರ ಸಂದರ್ಶನ

ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಖಾಲಿ ಹುದ್ದೆಗಳಿಗೆ ಸೆ.15 ರಂದು ನೇರ ಸಂದರ್ಶನ

spot_img
- Advertisement -
- Advertisement -

ಉಡುಪಿ: ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂದರ್ಶನ ಕರೆಯಲಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಮಕ್ಕಳ ತಜ್ಞ, ಅರಿವಳಿಕೆ ಹಾಗೂ ಸೋನೊಲಾಜಿಸ್ಟ್ ವಿಭಾಗದ ತಲಾ 1 ಹುದ್ದೆ ಹಾಗೂ ವೈದ್ಯಾಧಿಕಾರಿಗಳ 3 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಸೆ.15 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವಂತೆ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!