Friday, June 19, 2026
Homeತಾಜಾ ಸುದ್ದಿಮಣಿಪಾಲದಲ್ಲಿ ಜೂನ್ 18 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಣಿಪಾಲದಲ್ಲಿ ಜೂನ್ 18 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

- Advertisement -
- Advertisement -

ಉಡುಪಿಯ ಮಣಿಪಾಲದಲ್ಲಿರುವ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ (ಮನೋಹರ್ ಭವನ್ ಹೋಟೆಲ್ ಮುಂಭಾಗ) ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗಾಗಿ ಜೂನ್ 18 ರಂದು ಬೆಳಿಗ್ಗೆ 10:30 ಕ್ಕೆ ನೇರ ಸಂದರ್ಶನ ನಡೆಯಲಿದೆ.

ಡಿಪ್ಲೋಮಾ, ಮೆಕ್ಯಾನಿಕಲ್ ಮತ್ತು ಸಿಎನ್‌ಸಿ ಪ್ರಿಂಟಿಂಗ್ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳು, ಇತ್ತೀಚಿನ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ನ ಪ್ರತಿಯೊಂದಿಗೆ ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ, ಉಡುಪಿಯ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಅಥವಾ ಅವರ ಮೊಬೈಲ್ ಸಂಖ್ಯೆಗಳಾದ 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!