Wednesday, June 24, 2026
Homeತಾಜಾ ಸುದ್ದಿಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ನೇರ ನೇಮಕಾತಿ: ಸಚಿವ ಬಿ.ಸಿ....

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ನೇರ ನೇಮಕಾತಿ: ಸಚಿವ ಬಿ.ಸಿ. ನಾಗೇಶ್ ಟ್ವೀಟ್

- Advertisement -
- Advertisement -

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ( PU College ) ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ಕೂರಿದ್ದರು.

- Advertisement -

Latest News

error: Content is protected !!