Thursday, June 25, 2026
Homeಕರಾವಳಿಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ;ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತುಕತೆ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ;ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತುಕತೆ

- Advertisement -
- Advertisement -

ಬೆಂಗಳೂರು: ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರವಾಗಿ ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾತುಕತೆ ನಡೆದಿದೆ.

ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆದಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ., ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲ ಅಧ್ಯಕ್ಷರು ಸಭೆಯಲ್ಲಿ ಭಾಗಿಯಾಗಿದ್ದರು.

ಸಭೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಕೂಡಾ ಪಾಲ್ಗೊಂಡಿದ್ದರು.

ಯಾವುದೇ ಷರತ್ತು‌ ಇಲ್ಲದೇ ಅರುಣ್ ಕುಮಾರ್
ಪುತ್ತಿಲ ಅವರನ್ನು ಸೇರ್ಪಡೆ ಮಾಡಿಕೊಳ್ಳಲು ಬಿಜೆಪಿ ಒಲವು ಹೊಂದಿದ್ದು, ಪಕ್ಷ ಸೇರ್ಪಡೆ ನಿರ್ಧಾರವಾದರೆ ಸ್ಥಳೀಯ ಮಟ್ಟದಲ್ಲೇ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ಕಳೆದ ವಾರವಷ್ಟೇ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ಫರ್ಧಿಸುವುದಾಗಿ ಪುತ್ತಿಲ ಪರಿವಾರ ಘೋಷಣೆ ಮಾಡಿತ್ತು.

- Advertisement -

Latest News

error: Content is protected !!