- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ಇಂದು ಮಂಗಳೂರಿನಲ್ಲಿ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಭಾಗವಹಿಸಿದ್ದರು.
ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಸಭೆ ನಡೆಸಲಾಯಿತು.ಈ ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ, ದ.ಕ. ಜಿಲ್ಲೆಯ ಶಾಸಕರು, ದ.ಕ. ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಭಾಗವಹಿಸಿದ್ದರು.
ಅಲ್ಲದೇ ದಿಶಾ ಸಮಿತಿ ಸದಸ್ಯರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಾ ಸಭೆಯಲ್ಲಿ ಉಪಸ್ಥಿತರಿದ್ದರು.
- Advertisement -