Saturday, April 27, 2024
Homeತಾಜಾ ಸುದ್ದಿಬಂಟ್ವಾಳ: ಕಾರಿಂಜ ಆಸುಪಾಸು ಅಕ್ರಮ ಕಲ್ಲು ಗಣಿಗಾರಿಕೆ ಚಟುವಟಿಕೆ ಸ್ಥಗಿತ: ವಿ. ಸುನೀಲ್ ಕುಮಾರ್

ಬಂಟ್ವಾಳ: ಕಾರಿಂಜ ಆಸುಪಾಸು ಅಕ್ರಮ ಕಲ್ಲು ಗಣಿಗಾರಿಕೆ ಚಟುವಟಿಕೆ ಸ್ಥಗಿತ: ವಿ. ಸುನೀಲ್ ಕುಮಾರ್

spot_img
- Advertisement -
- Advertisement -

ಬಂಟ್ವಾಳ: ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಕಾವಳಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿ 03 ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾಧಿಗಳ ದೂರಿನ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ನಡೆಯುತ್ತಿದ್ದ 03 ಕಪ್ಪು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಕಾವಳ ಮೂಡೂರು ಗ್ರಾಮದ ಸರ್ವೆ ನಂ. 164/2ಪಿ1 ರಲ್ಲಿ 0.50 ಎಕ್ರೆ ಮತ್ತು 172/2ಪಿ1 ರಲ್ಲಿ 0.50 ಎಕ್ರೆ ಒಟ್ಟು 1.00 ಎಕ್ರೆ ಪ್ರದೇಶದಲ್ಲಿ 2007 ರಿಂದ ಗಣಿಗಾರಿಕೆ ನಡೆಯುತ್ತಿದ್ದು, ತನ್ನ ಪರವಾನಿಗೆಯ ವ್ಯಾಪ್ತಿ ಮೀರಿ ಸುಮಾರು 3.28 ಎಕ್ರೆ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡಿರುವ ಹಿನ್ನೆಲೆಯಲ್ಲಿ ರೂ. 8,12,87,198 ದಂಡ ಪಾವತಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಚಿಸಿದ್ದು ದಂಡ ಪಾವತಿಸದ ಕಾರಣ ಸದ್ರಿ ಗಣಿಗಾರಿಕೆಯನ್ನು 2021ರ ಡಿಸೆಂಬರ್ ತಿಂಗಳಲ್ಲಿ ಸ್ಥಗಿತಗೊಳಿಸಲಾಗಿದೆ ಹಾಗೂ ಅನಧಿಕೃತ ಗಣಿಗಾರಿಕೆ ನಡೆಸಿರುವ ಮಾಲಿಕರ ವಿರುದ್ಧ ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

- Advertisement -
spot_img

Latest News

error: Content is protected !!