Sunday, June 7, 2026
Homeಕರಾವಳಿಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಲಾಗುವ ವಾರ್ಷಿಕ ಪ್ರಶಸ್ತಿಗಳ ಪಟ್ಟಿ ಪ್ರಕಟ!

ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಲಾಗುವ ವಾರ್ಷಿಕ ಪ್ರಶಸ್ತಿಗಳ ಪಟ್ಟಿ ಪ್ರಕಟ!

- Advertisement -
- Advertisement -

ಶಿವಮೊಗ್ಗ : ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಮಾಡುವ ಮಕ್ಕಳ ಮಂದಾರ ವಾರ್ಷಿಕ ಪ್ರಶಸ್ತಿಗಳನ್ನು ಘೋಸಿಸಲಾಗಿದ್ದು ಮೈಸೂರಿನ ಶ್ರೀ ಯಲ್ಲಪ್ಪ ಕೆ. ಕೆ. ಮರ ಮತ್ತು ತುಮಕೂರಿನ ಪ್ರಕಾಶ್ ನಾಡಿಗ್ ಅವರುಗಳಿಗೆ ಹಾಗೂ ಕೊಡಕ್ಕಲ್ ಶಿವಪ್ರಸಾದ್ ದತ್ತಿ ಪ್ರಶಸ್ತಿಯನ್ನು ಮಕ್ಕಳ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಶ್ರೀಮತಿ ಅನಿತಾ ಮೇರಿ ಅವರಿಗೂ ಮುಂದೆ ಜರಗುವ ಸಮಾರಂಭದಲ್ಲಿ ನೀಡಲಾಗುವುದು ಎಂದು ಜಿಲ್ಲಾ ಅಧ್ಯಕ್ಷ ಶ್ರೀ ರವಿರಾಜ ಸಾಗರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲಾ ಘಟಕದ ಗೌರವ ಪುರಸ್ಕಾರಕ್ಕೆ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರನ್ನು ಹಾಗೂ ಮಕ್ಕಳ ಸಾಹಿತ್ಯ ಕೃಷಿ ಮತ್ತು ಶಿಕ್ಷಣಕ್ಕೆ ಪ್ರೇರಣಾದಾಯಕ ಕಾರ್ಯ ಮಾಡುತ್ತಿರುವ ಶಿಕ್ಷಕಿ ಶೋಭಾ ಸತೀಶ್ ಶಿವಮೊಗ್ಗ ಅವರನ್ನು ಆಯ್ಕೆ ಮಾಡಲಾಗಿದ್ದು ಮಕ್ಕಳ ಸಾಹಿತ್ಯ ಪರಿಷತ್ತಿನ ಮುಂದಿನ ಕಾರ್ಯಕ್ರಮಗಳಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಪ್ರಕಟಿಸಲಾಗಿದೆ.

- Advertisement -

Latest News

error: Content is protected !!