Sunday, April 28, 2024
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ ಹೇರಿದ ಜಿಲ್ಲಾಧಿಕಾರಿ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ ಹೇರಿದ ಜಿಲ್ಲಾಧಿಕಾರಿ

spot_img
- Advertisement -
- Advertisement -

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಾನುವಾರು ಸಾಗಾಟಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಾತ್ಕಾಲಿಕ ನಿಷೇಧ ಹೇರಿದ್ದಾರೆ.

ಚರ್ಮಗಂಟು ರೋಗವು ದನ ಮತ್ತು ಎಮ್ಮೆಗಳಲ್ಲಿ ಕಂಡು ಬರುತ್ತಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ದ.ಕ.ಜಿಲ್ಲೆಯಲ್ಲಿ ಚರ್ಮ ಗಂಟುರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ಅ.20ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!