Friday, May 17, 2024
Homeಕರಾವಳಿಮಂಗಳೂರು: ರೋಗಿಗಳಿಂದ ಹೆಚ್ಚುವರಿಯಾಗಿ ಪಡೆದ ₹3.69 ಲಕ್ಷ ಮರಳಿಸಲು ದ.ಕ ಜಿಲ್ಲಾಧಿಕಾರಿ ಸೂಚನೆ!

ಮಂಗಳೂರು: ರೋಗಿಗಳಿಂದ ಹೆಚ್ಚುವರಿಯಾಗಿ ಪಡೆದ ₹3.69 ಲಕ್ಷ ಮರಳಿಸಲು ದ.ಕ ಜಿಲ್ಲಾಧಿಕಾರಿ ಸೂಚನೆ!

spot_img
- Advertisement -
- Advertisement -

ಮಂಗಳೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ರೋಗಿಗಳಿಂದ ಚಿಕಿತ್ಸೆಗೆ ಹೆಚ್ಚಿನ ಹಣ ಪಡೆದ 7 ಆಸ್ಪತ್ರೆಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದು, ಕೂಡಲೇ ಪಡೆದ ಹೆಚ್ಚುವರಿ ಹಣವನ್ನು ಸಂತ್ರಸ್ತರಿಗೆ ವಾಪಾಸ್ ನೀಡಬೇಕೆಂದು ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಂದುಕೊರತೆ ಪರಿಹಾರ ಸಮಿತಿ ಸಭೆಯಲ್ಲಿ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸಂತ್ರಸ್ತರು ದಾಖಲಿಸಿದ್ದ ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿ, ವಾರದೊಳಗೆ ರೋಗಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿ, ಸ್ವೀಕೃತಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಆದೇಶಿಸಿದ್ದಾರೆ.

ಈ ಕುರಿತು ಕುಂದುಕೊರತೆ ಪರಿಹಾರ ಸಮಿತಿ ಸದಸ್ಯ ಕಾರ್ಯದರ್ಶಿಯೂ ಆಗಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್‌ಕುಮಾರ್ ಅವರು, ಏಳು ಆಸ್ಪತ್ರೆಗಳಿಗೆ ನೋಟಿಸ್‌ ಜಾರಿಗೊಳಿಸಿದ್ದು, ರೋಗಿಗಳಿಂದ ಹೆಚ್ಚುವರಿಯಾಗಿ ಪಡೆದಿರುವ ಒಟ್ಟು ₹3.69 ಲಕ್ಷ ಕೂಡಲೇ ಹಿಂದಿರುಗಿಸುವಂತೆ ಸೂಚಿಸಿದ್ದಾರೆ.

ಒಂದು ಖಾಸಗಿ ಆಸ್ಪತ್ರೆಯಲ್ಲಿ ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ನೀಡಲು ನಿರಾಕರಿಸಿದ್ದು, ಅದಕ್ಕಾಗಿ ₹1.50 ಲಕ್ಷ ಮರುಪಾವತಿಸುವಂತೆ ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಆದೇಶಿಸಿದೆ.

- Advertisement -
spot_img

Latest News

error: Content is protected !!