Wednesday, July 15, 2026
Homeಕರಾವಳಿಮಂಗಳೂರು: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಜಿಲ್ಲಾಧಿಕಾರಿ ಆದೇಶ...!

ಮಂಗಳೂರು: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಜಿಲ್ಲಾಧಿಕಾರಿ ಆದೇಶ…!

- Advertisement -
- Advertisement -

ಮಂಗಳೂರು: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ನಿರ್ವಹಣೆಯ ಕುರಿತು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಾಖಲಾತಿಗಳ ಪ್ರಕಾರ ಜಿಲ್ಲೆಯಲ್ಲಿ 644 ಕೆರೆಗಳಿವೆ, ಇನ್ನೂ ಹೆಚ್ಚುವರಿ ಕೆರೆಗಳಿದ್ದಲ್ಲಿ ಆರ್‌ಟಿಸಿಯನ್ನು ತಪಾಸಣೆ ಮಾಡಿ, ಕೂಲಂಕುಷವಾಗಿ ಪರಿಶೀಲಿಸಿ, ಈ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು, ಒತ್ತುವರಿ ತೆರವು ಗೊಂಡಿರುವ ಕೆರೆಗಳ ದಂಡೆಗಳಲ್ಲಿ ಗಿಡಗಳನ್ನು ನೆಡಬೇಕು, ಅವುಗಳ ಸುಂದರೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಇದಕ್ಕಾಗಿ ಇದೇ ಡಿ.31ರೊಳಗೆ ಸೂಕ್ತ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಜಿಲ್ಲೆಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

Latest News

error: Content is protected !!