Wednesday, June 3, 2026
Homeಕರಾವಳಿಮಂಗಳೂರುಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವ ಹಿನ್ನೆಲೆ; ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವ ಹಿನ್ನೆಲೆ; ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಡಿಸೆಂಬರ್ 2 ರ ತನಕ ನಡೆಯಲಿದೆ. ನವೆಂಬರ್ 25 ರಂದು ಪಂಚಮಿ ರಥೋತ್ಸವ, ತೈಲಾಭ್ಯಂಜನ ಹಾಗೂ 26 ರಂದು ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದ್ದು, ಸುಮಾರು 50 ರಿಂದ 60 ಸಾವಿರ ಭಕ್ತಾಧಿಗಳು ಸೇರುವ ನಿರೀಕ್ಷೆ ಇದೆ.

ಈ ವೇಳೆ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟುಮಾಡುವುದನ್ನು ತಪ್ಪಿಸಲು ಮತ್ತು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನವೆಂಬರ್ 25 ರಂದು ಬೆಳಿಗ್ಗೆ 6 ಗಂಟೆಯಿಂದ 26 ರ ರಾತ್ರಿ 12 ಗಂಟೆಯ ತನಕ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

- Advertisement -

Latest News

error: Content is protected !!