- Advertisement -
![]()
- Advertisement -
ಉಡುಪಿ: ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.
ಘಟನೆ ಬಗ್ಗೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ
ಅಲ್ಲದೇ ಮೂವರನ್ನು ಸುರಕ್ಷಿತವಾಗಿ ಕರೆತರಲು ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೂ ಸೂಚನೆ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತಕ್ಕೂ ನಿರ್ದೇಶನ ನೀಡಿದ್ದಾರೆ.
- Advertisement -


