Friday, June 5, 2026
Homeಕರಾವಳಿಉಡುಪಿಉಡುಪಿ ಘಟನೆ ವಿಚಾರದಲ್ಲಿ ರಾಜಕೀಯ ಬೇಡ, ಮಕ್ಕಳ‌ ಹಿತಾಸಕ್ತಿ ಮುಖ್ಯ:ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

ಉಡುಪಿ ಘಟನೆ ವಿಚಾರದಲ್ಲಿ ರಾಜಕೀಯ ಬೇಡ, ಮಕ್ಕಳ‌ ಹಿತಾಸಕ್ತಿ ಮುಖ್ಯ:ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

- Advertisement -
- Advertisement -

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ರಾಜಕೀಯ ಬಣ್ಣ ಬೇಡ, ಮಕ್ಕಳ ಹಿತದೃಷ್ಟಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಇಂತಹ ಪ್ರಕರಣಗಳು ಸಮಾಜಕ್ಕೆ ಕಳಂಕ, ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದು, ಯಾವುದೇ ಜಾತಿ ಧರ್ಮ ಮುಖ್ಯ ಅಲ್ಲ, ಮಕ್ಕಳ ಹಿತಾಸಕ್ತಿ ಮುಖ್ಯ ಎಂದು ಸಚಿವೆ ಲಕ್ಷ್ಮೀ‌ ಹೆಬ್ಬಾಳ್ಕರ್ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ತಿಳಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್, ಮಣಿಪುರ ಇಡೀ ರಾಜ್ಯವೇ ಹೊತ್ತಿ ಉರಿಯುತ್ತಿದೆ, ಅದರ ಬಗ್ಗೆ ತಲೆಕೆಡಿಸಿಕೊಳ್ಳದ ರಾಜ್ಯದ ವಿರೋಧ ಪಕ್ಷ, ಉಡುಪಿ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯಲು ಯತ್ನಿಸುತ್ತಿದೆ ಎಂದು ಕಿಡಿ ಕಾರಿದರು.

- Advertisement -

Latest News

error: Content is protected !!