Saturday, October 17, 2026
Homeಕರಾವಳಿಕುಕ್ಕರ್ ಬಾಂಬ್ ಸ್ಫೋಟಿಸಿದ ನಾಗುರಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಭೇಟಿ

ಕುಕ್ಕರ್ ಬಾಂಬ್ ಸ್ಫೋಟಿಸಿದ ನಾಗುರಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಭೇಟಿ

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆದ
ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆ ನಡೆದ ಬಳಿಕ ಮೊದಲ ಬಾರಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವರು ಬಾಂಬ್ ಸ್ಫೋಟಗೊಂಡ ನಾಗುರಿಗೆ ಭೇಟಿ ನೀಡಿದ್ದಾರೆ.

ಸಚಿವ ಸುನೀಲ್ ಕುಮಾರ್ ಜೊತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದರು.

ಭೇಟಿ ಬಳಿಕ ಮಾತನಾಡಿದ ಸಚಿವ ಸುನೀಲ್ ಕುಮಾರ್ ಎನ್ಐಎ ಘಟಕ ಇವತ್ತಲ್ಲ ನಾಳೆ ಮಂಗಳೂರಿನಲ್ಲಿ ಆಗುತ್ತದೆ, ಕೇಂದ್ರ ಸರ್ಕಾರ ಅದನ್ನು ಸಕಾರಾತ್ಮಕವಾಗಿ ಆಗಿ ಪರಿಶೀಲಿಸುತ್ತಿದೆ, ಸಂತ್ರಸ್ಥ ಅಟೋ ಚಾಲಕ‌ನ ಕುಟುಂಬಕ್ಕೆ ಸರ್ಕಾರದ ಕಡೆಯಿಂದ ಸೂಕ್ತ ಪರಿಹಾರ ಕೊಡಲಾಗುವುದು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!