Thursday, June 4, 2026
Homeತಾಜಾ ಸುದ್ದಿಐಎಎಸ್ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜವಾಬ್ದಾರಿ ಹಂಚಿಕೆ: ದ.ಕ. ಉಸ್ತುವಾರಿ ಕಾರ್ಯದರ್ಶಿಯಾಗಿ ಪೊನ್ನುರಾಜ್, ಉಡುಪಿಗೆ...

ಐಎಎಸ್ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜವಾಬ್ದಾರಿ ಹಂಚಿಕೆ: ದ.ಕ. ಉಸ್ತುವಾರಿ ಕಾರ್ಯದರ್ಶಿಯಾಗಿ ಪೊನ್ನುರಾಜ್, ಉಡುಪಿಗೆ ಮನೋಜ್ ಜೈನ್

- Advertisement -
- Advertisement -

ಬೆಂಗಳೂರು: 31 ಐಎಎಸ್ ಅಧಿಕಾರಿಗಳಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳ ಜವಾಬ್ದಾರಿಗಳನ್ನು ಮರು ಹಂಚಿಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ವಿ. ಪೊನ್ನುರಾಜ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಮನೋಜ್ ಜೈನ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.

ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಮಟ್ಟದ ಮುಖ್ಯಸ್ಥರುಗಳಿಗೆ ಜಿಲ್ಲಾವಾರು ಉಸ್ತುವಾರಿ ವಹಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಬಸವರಾಜ ಬೊಮ್ಮಾಯಿ‌ ನೇತೃತ್ವದ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಬದಲಾವಣೆ ‌ಮಾಡಲಾಗಿದೆ.

- Advertisement -

Latest News

error: Content is protected !!