Friday, June 5, 2026
Homeಕರಾವಳಿಉಡುಪಿಉಡುಪಿ: ಮಲ್ಪೆ ರಾಘವೇಂದ್ರ ಅವರಿಗೆ ನಾಳೆ ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ

ಉಡುಪಿ: ಮಲ್ಪೆ ರಾಘವೇಂದ್ರ ಅವರಿಗೆ ನಾಳೆ ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ

- Advertisement -
- Advertisement -

ಉಡುಪಿ : ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರ ಅವರು ಜಿಲ್ಲಾ ಮಟ್ಟದ ಪ್ರಥಮ ಡಿ.ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರಿಗೆ ನಾಳೆ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮ ದಲ್ಲಿ 50,000ರೂ. ನಗದು ಹಾಗೂ ಫಲಕದೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಚಲನಚಿತ್ರ, ಸಾಹಿತ್ಯ, ಯಕ್ಷಗಾನ ಹೀಗೆ ಹಲವು ಕ್ಷೇತ್ರಗಳಲ್ಲಿ ದುಡಿದಿರುವ 88 ವರ್ಷದ ಮಲ್ಪೆ ರಾಘವೇಂದ್ರ, 40 ವರ್ಷ ಶಿಕ್ಷಕರಾಗಿ ದುಡಿದಿದ್ದು, ಕಾಜಾರಗುತ್ತು ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ 1992ರಲ್ಲಿ ನಿವೃತ್ತರಾಗಿದ್ದರು.

- Advertisement -

Latest News

error: Content is protected !!