Friday, May 17, 2024
Homeತಾಜಾ ಸುದ್ದಿದಕ್ಷಿಣ ಕನ್ನಡ: ಜಿಲ್ಲೆಯ ಮೂರು ಕಡೆಗಳಲ್ಲಿ ಜೂ.21ರಂದು ಜಿಲ್ಲಾ ಮಟ್ಟದ ಯೋಗ ದಿನಾಚರಣೆ ಆಯೋಜನೆ

ದಕ್ಷಿಣ ಕನ್ನಡ: ಜಿಲ್ಲೆಯ ಮೂರು ಕಡೆಗಳಲ್ಲಿ ಜೂ.21ರಂದು ಜಿಲ್ಲಾ ಮಟ್ಟದ ಯೋಗ ದಿನಾಚರಣೆ ಆಯೋಜನೆ

spot_img
- Advertisement -
- Advertisement -

ದಕ್ಷಿಣ ಕನ್ನಡ: ಜಿಲ್ಲೆಯ ಹಲವು ಸಂಘ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಯೋಗ ದಿನಾಚರಣೆ ಜೂ. 21ರಂದು ನಡೆಯಲಿದ್ದು, ಈ ಪೈಕಿ ಮೂರು ಕಡೆಗಳಲ್ಲಿ ಜಿಲ್ಲಾ ಮಟ್ಟದ ಯೋಗ ದಿನಾಚರಣೆಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಮಹಾವಿದ್ಯಾಲಯ, ಎನ್‌ಎಸ್‌ಎಸ್, ಎನ್‌ಸಿಸಿ ಕೋ ಆರ್ಡಿನೇಟರ್, ವಿವಿಧ ಯೋಗ ಸಂಘಟನೆಗಳ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಪ್ರಧಾನ ಕಾರ್ಯಕ್ರಮ ಮಂಗಳೂರು ಪುರಭವನದಲ್ಲಿ ಜೂ. 21ರಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ಜತೆಗೆ ಆಳ್ವಾಸ್ ನುಡಿಸಿರಿ ವೇದಿಕೆ ಮೂಡುಬಿದಿರೆ ಹಾಗೂ ಸುಳ್ಯದ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ನಡೆಯಲಿದೆ. ಉಳಿದಂತೆ ಎಲ್ಲ ಆಯುಷ್ ಮಹಾವಿದ್ಯಾಲಯ, ಸಂಘ-ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಆಯೋಜಿಸಲಾಗಿದೆ. ಸುಮಾರು 1ಲಕ್ಷ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಜಿಲ್ಲೆಯಾದ್ಯಂತ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಸುಮಾರು 50 ಸಾವಿರ ಜನರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ವಿವಿಧ ಯೋಗ ಸಂಘಟನೆಗಳು, ಕಾಲೇಜುಗಳ ಸಹಕಾರದೊಂದಿಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!