ಮಂಗಳೂರು : ಕಚೇರಿಯ ಸಿಬ್ಬಂದಿ ಓರ್ವರಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಆರೋಪದ ಮೇಲೆ ದಾಖಲಾದ ದೂರಿನ್ವಯ ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ಫಾರೂಕ್ (47) ನನ್ನು ಅ.13 ರ ರಾತ್ರಿ 10ಗಂಟೆಗೆ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಚೇರಿಯಲ್ಲಿ ಕೆಲಸಕ್ಕಿದ್ದ 19 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಲೆತ್ನಿಸಿ, ವಾಟ್ಸಪ್ ಮೂಲಕ ನಗ್ನ ಚಿತ್ರಗಳನ್ನು ಕಳುಹಿಸಿ, ಸಹಕರಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ಯುವತಿಯ ನಗ್ನ ಚಿತ್ರವನ್ನು ಕಳುಹಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ.
ಇದಕ್ಕೆ ಸಹಕರಿಸದ ಆಕೆ ಆತನಿಂದ ದೂರವಿದ್ದು, ಇದರ ನಡುವೆ ಆತ ಕಛೇರಿಯಲ್ಲಿ ಆಕೆಯ ಮೈಗೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ಕೆಲಸವನ್ನೇ ಬಿಟ್ಟು ತೆರಳಿದ್ದ ಯುವತಿ ಎರಡು ದಿನಗಳ ಹಿಂದೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.