Thursday, June 4, 2026
Homeಕರಾವಳಿಮಂಗಳೂರುಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ದ.ಕ. ಜಿಲ್ಲಾ ಪೊಲೀಸ್ ಇಲಾಖೆಯಿಂದ ಠಾಣೆಗಳಲ್ಲಿ ಬ್ಯಾಂಕ್ ಮುಖ್ಯಸ್ಥರ ಸಭೆ

ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ದ.ಕ. ಜಿಲ್ಲಾ ಪೊಲೀಸ್ ಇಲಾಖೆಯಿಂದ ಠಾಣೆಗಳಲ್ಲಿ ಬ್ಯಾಂಕ್ ಮುಖ್ಯಸ್ಥರ ಸಭೆ

- Advertisement -
- Advertisement -

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚೆತ್ತಿದೆ.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ‌ವ್ಯಾಪ್ತಿಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಸಭೆ ನಡೆಸಲಾಗಿದೆ.

ಸಹಕಾರಿ ಬ್ಯಾಂಕ್ ಗಳು ಹಾಗೂ ಸೊಸೈಟಿಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳೊಂದಿಗೆ ಆಯಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ.

ಬ್ಯಾಂಕ್ ಮತ್ತು ಸೊಸೈಟಿಗಳಲ್ಲಿನ ಭದ್ರತೆಯ ಕುರಿತು ಸೂಚನೆ ನೀಡಲಾಗಿದ್ದು, ಭದ್ರತಾ ಸಿಬ್ಬಂದಿ ನೇಮಕಾತಿ ಮತ್ತು ಸಿಸಿ ಟಿವಿ ಅಳವಡಿಕೆ ಸೇರಿದಂತೆ ಭದ್ರತೆ ಖಾತ್ರಿಪಡಿಸಲು ನಿರ್ದೇಶನ ‌ನೀಡಲಾಗಿದೆ.

ಈ ಮಧ್ಯೆ ಕೋಟೆಕಾರ್ ಬ್ಯಾಂಕ್ ದರೋಡೆ ‌ಪ್ರಕರಣ ಸಂಬಂಧ ತನಿಖೆಗಾಗಿ ಎಸಿಪಿ‌ ಧನ್ಯಾ ನಾಯಕ್ ನೇತೃತ್ವದಲ್ಲಿ ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಇನ್ನು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

- Advertisement -

Latest News

error: Content is protected !!