Friday, June 5, 2026
Homeಕರಾವಳಿಉಡುಪಿದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭರ್ಜರಿ ಪ್ರದರ್ಶನ ತೋರಿದ ಕೊರೊನಾ, ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭರ್ಜರಿ ಪ್ರದರ್ಶನ ತೋರಿದ ಕೊರೊನಾ, ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಭರ್ಜರಿ ರನ್ ಗಳನ್ನೇ ಕಲೆ ಹಾಕಿದೆ. ಒಂದೇ ದಿನ 243 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,591ಕ್ಕೆ ಏರಿಕೆಯಾಗಿದೆ. ಅಲ್ಲದೇ 9 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,629 ಸಕ್ರಿಯ ಪ್ರಕರಣಗಳಿದ್ದು, 4,725 ಮಂದಿ ಗುಣಮುಖರಾಗಿದ್ದಾರೆ. ಇಂದು 647 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 235 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಉಡುಪಿಯಲ್ಲಿಂದು 219 ಹೊಸ ಕೇಸುಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 6,509ಕ್ಕೇರಿದೆ. ಸದ್ಯ 2,820 ಸಕ್ರಿಯ ಪ್ರಕರಣಗಳಿದ್ದು, 3623 ಮಂದಿ ಗುಣಮುಖರಾಗಿದ್ದಾರೆ. ಇಂದು 161 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೂ 66 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!