Friday, June 5, 2026
Homeಕರಾವಳಿಉಡುಪಿದಕ್ಷಿಣಕನ್ನಡದಲ್ಲಿಂದು 300ರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, ಉಡುಪಿಯಲ್ಲೂ ಜೋರಾಗಿದೆ ಕೋವಿಡ್ ಆರ್ಭಟ

ದಕ್ಷಿಣಕನ್ನಡದಲ್ಲಿಂದು 300ರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, ಉಡುಪಿಯಲ್ಲೂ ಜೋರಾಗಿದೆ ಕೋವಿಡ್ ಆರ್ಭಟ

- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು ಬರೋಬ್ಬರಿ 314 ಪ್ರಕರಣಗಳು ಇಂದು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 11,092ಕ್ಕೇರಿದೆ. ಇನ್ನು 11 ಮಂದಿ ಇಂದು ಕೋವಿಡ್ ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 2,339 ಸಕ್ರಿಯ ಪ್ರಕರಣಗಳಿದ್ದು, 8,423 ಮಂದಿ ಗುಣಮುಖರಾಗಿದ್ದಾರೆ. ಇಂದು 296 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನು ಉಡುಪಿ ಜಿಲ್ಲೆಯಲ್ಲಿ ಒಟ್ಟು 251 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ 10,704ಕ್ಕೇರಿದೆ. ಜಿಲ್ಲೆಯಲ್ಲಿ ಈವರೆಗೆ 92 ಮಂದಿ ಕೋವಿಡ್ ಸೋಂಕಿನಿಂದ ಮೃತ ಪಟ್ಟಿದ್ದಾರೆ. ಇಂದು ಹೆಮ್ಮಾರಿ ಒಬ್ಬರನ್ನು ಬಲಿ ಪಡೆದುಕೊಂಡಿದೆ. ಸದ್ಯ ಜಿಲ್ಲೆಯಲ್ಲಿ 2,752 ಸಕ್ರಿಯ ಪ್ರಕರಣಗಳಿದ್ದು, 7861 ಮಂದಿ ಗುಣಮುಖರಾಗಿದ್ದಾರೆ. ಇಂದು 246 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Latest News

error: Content is protected !!