Saturday, June 6, 2026
Homeಕರಾವಳಿದ.ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ದ.ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

- Advertisement -
- Advertisement -

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರದಂದು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಅವರು ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಅರುಣ್ ಕುಮಾರ್ ಪುತ್ತಿಲ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ದ.ಕ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಸಹಿತ ಪ್ರಮುಖರು ಭಾಗವಹಿಸಿದರು.

- Advertisement -

Latest News

error: Content is protected !!