Monday, May 6, 2024
Homeಕರಾವಳಿಉಡುಪಿಕರಾವಳಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆ : ಪ್ರಸಿದ್ಧ ದೇವಸ್ಥಾನಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ

ಕರಾವಳಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆ : ಪ್ರಸಿದ್ಧ ದೇವಸ್ಥಾನಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ

spot_img
- Advertisement -
- Advertisement -

ಮಂಗಳೂರು: ಕೇರಳ ಹಾಗೂ ದ.ಕ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಾರ್ವಜನಿಕರ ಹಿತದೃಷ್ಟಿ ಹಿನ್ನೆಲೆ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ನೀಡಿ ವಾರಾಂತ್ಯದಲ್ಲಿ ವಾರಾಂತ್ಯದಲ್ಲಿ ಸಂಪೂರ್ಣವಾಗಿ ಬಂದ್ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.

ಆ.15ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ, ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇಗುಲ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಮಾತ್ರ ತೆರೆದಿರುತ್ತವೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸುರಕ್ಷಿತ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತರಿಗೆ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ವಾರಾಂತ್ಯದಲ್ಲಿ (ಶನಿವಾರ-ರವಿವಾರ) ಭಕ್ತರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ವಸತಿ ಗೃಹಗಳಲ್ಲಿ ತಂಗುವುದಾಗಲಿ ಅಥವಾ ದೇವರ ದರ್ಶನಕ್ಕೆ ಅವಕಾಶವಿಲ್ಲ. ವಾರಾಂತ್ಯದಲ್ಲಿ ಎಲ್ಲ ರೀತಿಯ ಉತ್ಸವ/ ಸೇವೆಗಳು, ತೀರ್ಥ, ಪ್ರಸಾದ, ಮುಡಿ ಸೇವೆ ವಸತಿಗಳನ್ನು ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಾರಾಂತ್ಯ ಹೊರತುಪಡಿಸಿ ಉಳಿದ ದಿನಗಳಲ್ಲಿ ವಸತಿ ಗೃಹಗಳಲ್ಲಿ ತಂಗಲು ಬಯಸುವವರು 72 ಗಂಟೆಯೊಳಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರತಕ್ಕದ್ದು. ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವ ಹಾಗೂ ಕೋವಿಡ್ ಶಿಷ್ಟಾಚಾರ ನಿಯಮ ಪಾಲಿಸುವ ದೃಷ್ಟಿಯಿಂದ ಕೊಠಡಿಗಳಲ್ಲಿ ಕಡ್ಡಾಯವಾಗಿ ಹೆಚ್ಚುವರಿ ವ್ಯಕ್ತಿಗಳು ತಂಗಲು ಅವಕಾಶವಿಲ್ಲ. ಎಲ್ಲಾ ಕೊಠಡಿಗಳನ್ನು ವಾಸ್ತವ್ಯಕ್ಕೆ ಮೊದಲು ಸ್ಯಾನಿಟೈಸ್ ಮಾಡತಕ್ಕದ್ದು. ಭಕ್ತರು ಮಾಸ್ಕ್ ಕಡ್ಡಾಯವಾಗಿ ಧರಿಸಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

- Advertisement -
spot_img

Latest News

error: Content is protected !!