Thursday, April 18, 2024
Homeಕರಾವಳಿಅತೀ ಹೆಚ್ಚು ಕೊರೊನ ಪ್ರಕರಣ : ಜಿಲ್ಲಾಡಳಿತದ ಚಿತ್ತ ಬಂಟ್ವಾಳದತ್ತ

ಅತೀ ಹೆಚ್ಚು ಕೊರೊನ ಪ್ರಕರಣ : ಜಿಲ್ಲಾಡಳಿತದ ಚಿತ್ತ ಬಂಟ್ವಾಳದತ್ತ

spot_img
- Advertisement -
- Advertisement -

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೇ ಅತೀ ಹೆಚ್ಚು ಕೊರೊನ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ ಕೊರೊನಾ ಸೋಂಕಿನ ಮುನ್ನೆಚರಿಕಾ ಕ್ರಮದ ಬಗ್ಗೆ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳ ಸಭೆ ಏ.26 ರಂದು ಜಿಲ್ಲಾ ಉಸ್ತುವಾ ರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಉಪಸ್ಥಿತಿಯಲ್ಲಿ ಬಂಟ್ವಾಳ ಪ್ರವಾಸಿ ಬಂಗಲೆಯಲ್ಲಿ ಜರಗಿತು.
ದ.ಕ.ಜಿಲ್ಲೆಯಲ್ಲಿ ಕೋವಿಡ್ 19 ನ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ತಿಳಿದಕೊಂಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಂದಿನ ಮೇ.3 ರ ತನಕ ಲಾಕ್ ಡೌನ್ ಅವಧಿಯನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಯಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬಂಟ್ವಾಳ ನಗರ ಪ್ರದೇಶದಲ್ಲಿ ಲಾಕ್ ಡೌನ್ ಬಿಗಿಗೊಳಿಸುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರು.
ಇಂದು ಪಾಸಿಟಿವ್ ಪ್ರಕರಣ ದಾಖಲಾದ ನರಿಕೊಂಬು ಗ್ರಾಮದ ನಾಯಿಲ ಪ್ರದೇಶದಲ್ಲಿ ಸೀಲ್ ಡೌನ್ ಮಾಡುವ ವಿಚಾರ ಹಾಗೂ ಅಲ್ಲಿನ ಸಮಸ್ಯೆ ಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಸಹಾಯಕ ಆಯುಕ್ತ ಮದನ್ ಮೋಹನ್, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಬಂಟ್ವಾಳ ವೃತ್ತ ನಿರೀಕ್ಷಕ ನಾಗರಾಜ್, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!