Sunday, June 2, 2024
Homeಕರಾವಳಿಆ.15ರೊಳಗೆ ಜಿಲ್ಲೆಗೆ ಕೋವಿಡ್ ಲಸಿಕೆಯನ್ನು ಪೂರೈಸುವಂತೆ ರಾಜ್ಯ ಸರ್ಕಾರಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ನಿಂದ...

ಆ.15ರೊಳಗೆ ಜಿಲ್ಲೆಗೆ ಕೋವಿಡ್ ಲಸಿಕೆಯನ್ನು ಪೂರೈಸುವಂತೆ ರಾಜ್ಯ ಸರ್ಕಾರಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ನಿಂದ ಒತ್ತಾಯ!

spot_img
- Advertisement -
- Advertisement -

ಮಂಗಳೂರು: ಆ.15ರೊಳಗೆ ಬೇಡಿಕೆಗೆ ಅನುಗುಣವಾಗಿ ಕೋವಿಡ್ ಲಸಿಕೆಯನ್ನು ಪೂರೈಸುವಂತೆ ರಾಜ್ಯ ಸರಕಾರಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದು, ಅದರೊಳಗೆ ಪೂರೈಸದಿದ್ದರೆ ರಾಜ್ಯ ಸರಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ.

ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಸಿ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ದ.ಕ.ಜಿಲ್ಲೆಯಲ್ಲಿ ಜನರು ಲಸಿಕೆಗಾಗಿ ಅಲೆದಾಡುತ್ತಿದ್ದಾರೆ. ದ.ಕ.ಜಿಲ್ಲಾಧಿಕಾರಿಯ ಬಳಿ ಕಾಂಗ್ರೆಸ್ ನಿಯೋಗ ತೆರಳಿ ಈ ಬಗ್ಗೆ ಸಮಾಲೋಚನೆ ನಡೆಸಿದಾಗ ಅಗತ್ಯವಿರುವಷ್ಟು ಲಸಿಕೆಯು ಬರುತ್ತಿಲ್ಲ ಎಂಬ ಉತ್ತರ ನೀಡಿದ್ದಾರೆ.ರಾಜ್ಯ ಸರಕಾರಕ್ಕೆ ದ.ಕ.ಜಿಲ್ಲೆಯ ಜನತೆಯ ಮೇಲೆ ಎಷ್ಟು ಕಾಳಜಿ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.


ಕೊರೋನ ಮೂರನೆ ಅಲೆಯ ಭೀತಿಯಲ್ಲಿ ಜನರಿದ್ದರೂ ಕೂಡ ರಾಜ್ಯ ಸರಕಾರ ಆಂತರಿಕ ಕಚ್ಚಾಟದಲ್ಲಿ ಮುಳುಗಿದೆ. ಬೆಂಗಳೂರಿನ ಬಳಿಕ ಮಂಗಳೂರು ರಾಜ್ಯದಲ್ಲೇ ಕೋವಿಡ್ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಯ ಬದಲಾವಣೆಯಾಗಿದೆಯೇ ವಿನಃ ಆಡಳಿತ ಯಂತ್ರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕೋವಿಡ್‌ನಿಂದ ಜನರ ಸಾವು ಮತ್ತು ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದ್ದು,ಅದನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹರೀಶ್ ಕುಮಾರ್ ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವಿದ್ದು, ಎಷ್ಟೇ ಆರೋಪ ಬಂದರೂ ಕೂಡ ತನಿಖೆಗೊಳಗಾಗುವ ನೈತಿಕ ಧೈರ್ಯವು ಈ ಸರ್ಕಾರಕ್ಕಿಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ವಿಜಯೇಂದ್ರ 20 ಸಾವಿರ ಕೋ.ರೂ. ಭ್ರಷ್ಟಾಚಾರ ಎಸಗಿದ್ದಾರೆ ಎಂದು ಸ್ವತಃ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಆದಾಗ್ಯೂ ಬಿಜೆಪಿ ಹೈಕಮಾಂಡ್ ಸುಮ್ಮನಿವೆ ಎಂದು ಹರೀಶ್ ಕುಮಾರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಪಕ್ಷದ ಮುಖಂಡರಾದ ಸದಾಶಿವ ಉಳ್ಳಾಲ್, ಎಂ.ಎಸ್.ಮುಹಮ್ಮದ್, ಶಶಿಧರ ಹೆಗ್ಡೆ, ಶಾಲೆಟ್ ಪಿಂಟೋ, ಸದಾಶಿವ ಶೆಟ್ಟಿ, ಮಮತಾ ಗಟ್ಟಿ, ಲಾರೆನ್ಸ್ ಡಿಸೋಜ, ಜೆ. ಅಬ್ದುಲ್ ಸಲೀಂ, ರಾಜಶೇಖರ ಕೋಟ್ಯಾನ್, ಶುಭೋದಯ ಆಳ್ವ, ಜೋಕಿಂ ಡಿಸೋಜ, ನಝೀರ್ ಬಜಾಲ್, ಗಣೇಶ್ ಪೂಜಾರಿ, ಶೋಭಾ ಕೇಶವ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!