Saturday, August 29, 2026
Homeಕರಾವಳಿರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ;ಮಂಗಳೂರಿನಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ;ಮಂಗಳೂರಿನಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

- Advertisement -
- Advertisement -

ಮಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ವಿರುದ್ಧ ಏನೇನು ಕ್ರಮ ಕೈಗೊಳ್ಳಬೇಕು ಅದನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬ್ರಾಂಡ್ ಬೆಂಗಳೂರನ್ನು ಬಾಂಬ್ ಬೆಂಗಳೂರು ಮಾಡಬೇಡಿ ಎಂಬ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಮಂಗಳೂರಿನಲ್ಲಿ ಇಂದು ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಯಾರು ಮಾಡಿದ್ದಾರೆ, ಅವರ ಉದ್ದೇಶ ಏನು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು ಎಂದಿರುವ ದಿನೇಶ್ ಗುಂಡೂರಾವ್, ಬಿಜೆಪಿಯವರಿಗೆ ಇಂತಹ ವಿಚಾರಗಳನ್ನ ಬಿಟ್ಟರೆ ಬೇರೇನೂ ಇಲ್ಲ ಎಂದ ಎಂದಿದ್ದಾರೆ.

ಪುಲ್ವಾಮಾ ಎಂಬ ಸೂಕ್ಷ್ಮ ಪ್ರದೇಶದಲ್ಲಿ 150 ಕೆಜಿ ಆರ್ ಡಿ ಎಕ್ಸ್ ಹೇಗೆ ಬಂತು ಎಂದು ಪ್ರಶ್ನೆ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ, ದೇಶದ ಹಿತರಕ್ಷಣೆಯ ವಿಚಾರ ಬಂದಾಗ ನಾವೆಲ್ಲರೂ ಒಂದಾಗಿರಬೇಕು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!