ನವದೆಹಲಿ : ದೇಶವನ್ನೇ ಆಲ್ಲೋಲ ಕಲ್ಲೋಲ ಮಾಡಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನ ಕೈಗೊಂಡಿದ್ದು, ದೇಶದಲ್ಲಿ 170 ಜಿಲ್ಲೆಗಳು ಕೊರೊನಾ ವೈರಸ್ ಹಾಟ್‌ಸ್ಪಾಟ್‌ಗಳಾಗಿವೆ. ಇದರಲ್ಲಿ 207 ಜಿಲ್ಲೆಗಳು ಅಪಾಯದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಅತಿ ಹೆಚ್ಚು ಕರೊನಾ ಬಾಧಿತವಾಗಿರುವ ರಾಷ್ಟ್ರದ 170 ಜಿಲ್ಲೆಗಳ ಪೈಕಿ ಕರ್ನಾಟಕದ 8 ಜಿಲ್ಲೆಗಳು ಕೂಡ ಸೇರಿವೆ. ಯಾವ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿ ಇದೆಯೋ ಅಂಥಹ ಜಿಲ್ಲೆಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಹಾಟ್ ಸ್ಪಾಟ್ ಎಂದು ಗುರುತಿಸಿದೆ.
ಕರ್ನಾಟಕದ ಬೆಂಗಳೂರು ನಗರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಆರೋಗ್ಯ ಇಲಾಖೆ ದೇಶದಲ್ಲಿ ಕೊರೊನಾ ಸೋಂಕು ಇರುವ ಮತ್ತು ಇಲ್ಲದಿರುವ ಜಿಲ್ಲೆಗಳನ್ನ ಒಟ್ಟು ಮೂರು ವಲಯಗಳಲ್ಲಿ ವಿಂಗಡಿಸಿದೆ. ಇದರಲ್ಲಿ ಒಂದು ಹಾಟ್ಸ್ಪಾಟ್, ಎರಡನೆಯದ್ದು ನಾನ್ ಹಾಟ್ಸ್ಪಾಟ್ ಮತ್ತು ಮೂರನೆಯದ್ದು ಹಸಿರು ವಲಯದ ಜಿಲ್ಲೆಗಳು.
ಈಗಾಗಲೇ ಕೊರೊನಾ ಸೋಂಕು ದೃಢಪಟ್ಟಿರುವ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುವ ಸಾಧ್ಯತೆಗಳು ದಟ್ಟವಾಗಿರುವ ಜಿಲ್ಲೆಗಳನ್ನ ಹಾಟ್ಸ್ಪಾಟ್ ಜಿಲ್ಲೆಗಳು ಎಂದು ಪರಿಗಣಿಸಲಾಗಿದೆ.