- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ನಲ್ಲಿಡಲಾಗಿದೆ.
ಇತ್ತೀಚೆಗೆ ಕೊರೋನ ವೈರಸ್ ಸೋಂಕಿಗೊಳಗಾಗಿ ಮೃತಪಟ್ಟ ಬಂಟ್ವಾಳ ಮೂಲದ ಮಹಿಳೆಯ ದೂರದ ಸಂಬಂಧಿಕರಾಗಿರುವ ಜಿಲ್ಲಾಧಿಕಾರಿಯ ಕಚೇರಿಯ ಸಿಬ್ಬಂದಿಯೊಬ್ಬರನ್ನು 14 ದಿನಗಳ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗಿದೆ.
ಈ ಸಿಬ್ಬಂದಿಯು ಕೊರೋನ ಸೋಂಕಿತ ಮಹಿಳೆಯ ಆರೋಗ್ಯ ಸ್ಥಿತಿಯ ಬಗ್ಗೆ ಅವರಿಗೆ ಚಿಕಿತ್ಸೆ ನೀಡಿದ್ದ ವೈದ್ಯರನ್ನು ಎ.18ರಂದು ಸಂಪರ್ಕಿಸಿ ವಿಚಾರಿಸಿದ್ದರು. ಆದರೆ ಈ ಸಂದರ್ಭ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯನ್ನು ಅವರು ಭೇಟಿ ಮಾಡಿರಲಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತದ ಈ ಸಿಬ್ಬಂದಿಯನ್ನು 14 ದಿನಗಳ ಕ್ವಾರಂಟೈನ್‌ನಲ್ಲಿರಿಸಲಾಗಿದೆ ಎಂದು ದ.ಕ. ಡಿಎಚ್‌ಒ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.
- Advertisement -