Tuesday, June 23, 2026
Homeತಾಜಾ ಸುದ್ದಿಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ವಿಚಾರಣಾಧೀನ ಕೈದಿಗಳಾಗಿರುವ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿದ ಡಿಸಿಎಂ ಡಿ.ಕೆ.‌...

ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ವಿಚಾರಣಾಧೀನ ಕೈದಿಗಳಾಗಿರುವ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿದ ಡಿಸಿಎಂ ಡಿ.ಕೆ.‌ ಶಿವಕುಮಾರ್

- Advertisement -
- Advertisement -

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿದರು.

ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಹಾಗೂ ವೀರೇಂದ್ರ ಪಪ್ಪಿ ಆನ್ ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಗಳಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಜೈಲಿಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಮೊದಲಿಗೆ ಶಾಸಕ ವೀರೇಂದ್ರ ಪಪ್ಪಿ ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ಶಾಸಕ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.

ಕಾಂಗ್ರೆಸ್ ನಲ್ಲಿ ಎರಡೂವರೆ ವರ್ಷಗಳ ಬಳಿಕದ ಅಧಿಕಾರ ಹಂಚಿಕೆ ಕುರಿತ ಬೆಳವಣಿಗೆಗಳ ಮಧ್ಯೆಯೇ ಡಿ.ಕೆ. ಶಿವಕುಮಾರ್ ಜೈಲಿನಲ್ಲಿರುವ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.

- Advertisement -

Latest News

error: Content is protected !!