Wednesday, June 3, 2026
Homeಕರಾವಳಿಮಂಗಳೂರು: ಆಸ್ಕರ್ ಫರ್ನಾಂಡೀಸ್ ರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಮಂಗಳೂರು: ಆಸ್ಕರ್ ಫರ್ನಾಂಡೀಸ್ ರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

- Advertisement -
- Advertisement -

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದು, ಮುಂಜಾನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಕ್ಷದ ಜಿಲ್ಲಾ ವರಿಷ್ಠರು ಡಿಕೆಶಿಯವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.

ಈ ಸಮಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಯು.ಟಿ ಖಾದರ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕಾಂಗ್ರೆಸ್ ಮುಖಂಡ ಐವನ್ ಡಿಸೋಜ ಹಾಗೂ ಅನೇಕ ವಕ್ಷದ ನಾಯಕರು ಉಪಸ್ಥಿರಿದ್ದರು.

ನಂತರ ಡಿ.ಕೆ. ಶಿವಕುಮಾರ್ ಅವರು ತನ್ನ ರಾಜಕೀಯ ಗುರು ಹಾಗೂ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಮಂಗಳೂರು ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಕರ್ ಅವರ ಪತ್ನಿ ಬ್ಲಾಸಂ ಫರ್ನಾಂಡೀಸ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಈ ಸಂದರ್ಭದಲ್ಲಿ ಇದ್ದರು.

ಹಾಗೆಯೆ ಜಿಲ್ಲೆಯಲ್ಲಿರುವ ಮತ್ತೋರ್ವ ರಾಜಕೀಯ ಗುರು ಮತ್ತು ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರನ್ನು ಭೇಟಿಮಾಡಿ ಆಶೀರ್ವಾದ ಪಡೆಯಲಿದ್ದೇನೆ ಎಂದರು.

- Advertisement -

Latest News

error: Content is protected !!