Sunday, June 7, 2026
Homeತಾಜಾ ಸುದ್ದಿKPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೊರೊನಾ ಸೋಂಕು ದೃಢ

KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೊರೊನಾ ಸೋಂಕು ದೃಢ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ವೈರಸ್ ಸೋಂಕು ತಗುಲಿದೆ.

ಕಳೆದ ನಾಲ್ಕು ದಿನಗಳಿಂದ ಬೆನ್ನು ನೋವು, ಜ್ವರದಿಂದ ಬಳಲುತ್ತಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಎರಡು ದಿನಗಳ ಹಿಂದೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಡಿ.ಕೆ ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಿ.ಕೆ.ಶಿವಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!