Friday, June 5, 2026
Homeಉದ್ಯಮಕೊರೊನದಿಂದ ತತ್ತರಿಸಿದ ಹೊಟೇಲ್ ಉದ್ಯಮಕ್ಕೆ ನೆರವು ನೀಡಿ : ಡಿ.ಕೆ.ಶಿ

ಕೊರೊನದಿಂದ ತತ್ತರಿಸಿದ ಹೊಟೇಲ್ ಉದ್ಯಮಕ್ಕೆ ನೆರವು ನೀಡಿ : ಡಿ.ಕೆ.ಶಿ

- Advertisement -
- Advertisement -

ಬೆಂಗಳೂರು: ಕೊರೋನಾ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿ ತತ್ತರಿಸಿರುವ ಹೊಟೆಲ್ ಉದ್ಯಮಕ್ಕೆ ನೆರವು ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಮಾರಕ ಕೊರೊನ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಹೊಟೇಲ್ ಉದ್ಯಮಕ್ಕೆ ವಿವಿಧ ಶುಲ್ಕ ವಿನಾಯಿತಿ ನೀಡಬೇಕು ಮತ್ತು ಕಾರ್ಮಿಕರಿಗೆ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೋವಿಡ್‍ನಿಂದಾಗಿ ಎಲ್ಲಾ ಉದ್ಯಮಗಳು ತತ್ತರಿಸಿವೆ. ಹೊಟೇಲ್ ಉದ್ಯಮ ಕೂಡ ಸಂಕಷ್ಟದಲ್ಲಿದೆ ಎಂದು ಹೇಳಿದ್ದಾರೆ.
2020-21 ನೇ ಸಾಲಿನ ಸನದು ಶುಲ್ಕ ವಿನಾಯಿತಿ ನೀಡಿ, ಉಳಿದ ಶುಲ್ಕ ಕಟ್ಟಲು ಆರು ಕಂತುಗಳ ಅವಕಾಶ ನೀಡಬೇಕು. ಈಗಾಗಲೇ ಸನದು ಶುಲ್ಕ ತುಂಬಿದವರ ಶುಲ್ಕವನ್ನು ಮುಂದಿನ ವರ್ಷದ ತೆರಿಗೆ ಶುಲ್ಕದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಹಾಗೂ ಹೊಟೆಲ್ ಕಾರ್ಮಿಕರಿಗೆ ಸಹಾಯಧನದ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!