Wednesday, June 26, 2024
Homeಕರಾವಳಿಸುಳ್ಯ: ಅ. 5 ರಂದು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್!

ಸುಳ್ಯ: ಅ. 5 ರಂದು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್!

spot_img
- Advertisement -
- Advertisement -

ಸುಳ್ಯ: ಸುಳ್ಯ ನ್ಯಾಯಾಲಯದಿಂದ ಹಲವು ಬಾರಿ ವಾರಂಟ್ ಜಾರಿಯಾದ ಬಳಿಕ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾಕ್ಷಿ ನುಡಿಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅ.5ರಂದು ಬೆಳಗ್ಗೆ 11.30ಕ್ಕೆ ಸುಳ್ಯ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ.

2016ರಲ್ಲಿ ವಿದ್ಯುತ್ ಸಮಸ್ಯೆ ಕುರಿತು ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಸಾಯಿ ಗಿರಿಧರ್ ಮತ್ತು ಅಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಡುವೆ ಪೋನ್ ಮೂಲಕ ಮಾತಿನ ಚಕಮಕಿ ನಡೆದಿತ್ತು. ಈ ಕುರಿತು ಡಿಕೆಶಿ ಸೂಚನೆಯಂತೆ ಮೆಸ್ಕಾಂ ಅಧಿಕಾರಿಯೊಬ್ಬರು ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದರು .ಈ ದೂರಿನ ಆಧಾರದಲ್ಲಿ ಸಾಯಿ ಗಿರಿಧರ್ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

ಈ ಪ್ರಕರಣದಲ್ಲಿ ಸಾಕ್ಷ್ಯ ನುಡಿಯಲು ಹಾಜರಾಗುವಂತೆ ಡಿಕೆಶಿಗೆ ಮೂರು ಬಾರಿ ಸಮನ್ಸ್ ನೀಡಿದ್ದರು ಕೋರ್ಟ್ ಗೆ ಹಾಜರಾಗಿರಲಿಲ್ಲ. ಸೆ.29ರಂದು ಹಾಜರಾಗುವಂತೆ ವಾರಂಟ್ ನೀಡಿದ್ದರೂ ಗೈರುಹಾಜರಾದ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಧೀಶರು ಡಿ.ಕೆ. ಶಿವಕುಮಾರ್ ಅವರಿಗೆ ನ.6 ರಂದು ನ್ಯಾಯಾಲಯದ ಎದುರು ಹಾಜರಾಗುವಂತೆ ಮತ್ತೊಮ್ಮೆ ವಾರೆಂಟ್ ಜಾರಿ ಮಾಡಿತ್ತು. ಅಲ್ಲದೆ ಡಿಕೆಶಿ ಅವರನ್ನು ಕೋರ್ಟ್ ಹಾಜರುಪಡಿಸುವಂತೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದರು. ಅದರಂತೆ ಡಿ.ಕೆ. ಶಿವಕುಮಾರ್ ಅವರು ಅ.5ರಂದು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ಹೇಳಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅ.5ರಂದು ಬೆಳಗ್ಗೆ 7.25ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರುಏರ್ ಪೋರ್ಟ್ ಗೆ ಬಂದಿಳಿಯಲಿದ್ದು, 11 ಗಂಟೆಗೆ ರಸ್ತೆ ಮೂಲಕ ಸುಳ್ಯಕ್ಕೆ ತೆರಳಿ, 11.30ಕ್ಕೆ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಸಂಜೆ 3 ಗಂಟೆಗೆ ಕುಕ್ಕೆಯಿಂದ ನಿರ್ಗಮಿಸಿ, 5.30ಕ್ಕೆ ಮಂಗಳೂರು ತಲುಪಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಡಿಕೆಶಿಯ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!