Wednesday, June 24, 2026
Homeತಾಜಾ ಸುದ್ದಿಡಿ ಕೆ ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ

ಡಿ ಕೆ ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ

- Advertisement -
- Advertisement -

ಕೋಲಾರ ; ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಟೇಕಾಫ್ ವೇಳೆ ಹದ್ದು ಡಿಕ್ಕಿಯಾದ ಘಟನೆ ಜಕ್ಕೂರು ಹೆಲಿಪ್ಯಾಡ್‌ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ನಡೆದಿದೆ.

ಜಕ್ಕೂರ್ ಹೆಲಿಪ್ಯಾಡ್‌ನಿಂದ ಟೇಕಾಫ್ ಆದ ಕೆಲ ಕ್ಷಣಗಳಲ್ಲೇ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದಿದೆ.ಹದ್ದು ಡಿಕ್ಕಿಯಾದ ರಭಸಕ್ಕೆ ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದೆ. ಡಿಕೆ ಶಿವಕುಮಾರ್ ಜೊತೆಗಿದ್ದ ಇತರ ಕೆಲವರಿಗೆ ಗಾಯಗಳಾಗಿದೆ. ಡಿಕೆ ಶಿವಕುಮಾರ್ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಲಿಕಾಪ್ಟರ್‌ ಗಾಜು ಪುಡಿ, ಪುಡಿ ಆಗುತ್ತಿದ್ದಂತೆ ಎಲ್ಲರಿಗೂ ಗಾಬರಿ ಆಗಿದೆ. ಕೊನೆಗೆ ಡಿಕೆ ಶಿವಕುಮಾರ್ ಅವರಿದ್ದ ಹೆಲಿಕಾಪ್ಟರ್‌ ಅನ್ನು HALನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ಘಟನೆಯಿಂದ ಹೆಲಿಕಾಪ್ಟರ್ ಪ್ರಯಾಣವನ್ನೇ ರದ್ದು ಮಾಡಿರುವ ಡಿಕೆ ಶಿವಕುಮಾರ್ ರಸ್ತೆ ಮೂಲಕ ಪ್ರಯಾಣ ಬೆಳೆಸಿದ್ದಾರೆ. ರಸ್ತೆ ಮೂಲಕ ಕೋಲಾರದ ಮುಳಬಾಗಿಲಿನಲ್ಲಿ ಆಯೋಜಿಸಿರುವ ಸಾರ್ವಜನಿಕ ಪ್ರಚಾರಕ್ಕೆ ತೆರಳಿದ್ದಾರೆ.

- Advertisement -

Latest News

error: Content is protected !!