Saturday, June 28, 2025
Homeತಾಜಾ ಸುದ್ದಿಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಗೆ ಕೊರೋನಾ ಪಾಸಿಟಿವ್!.. ಬದಲಾಗಲಿದೆಯಾ ತನಿಖೆಯ ಗತಿ?

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಗೆ ಕೊರೋನಾ ಪಾಸಿಟಿವ್!.. ಬದಲಾಗಲಿದೆಯಾ ತನಿಖೆಯ ಗತಿ?

spot_img
- Advertisement -
- Advertisement -

ಬೆಂಗಳೂರು :ರಾಜ್ಯದ ಅನೇಕ ಜನಪ್ರತಿನಿಧಿಗಳು ಕೊರೋನಾ ಸಂಕಷ್ಟಕ್ಕೆ ಒಳಗಾಗಿದ್ದರು. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ಕೊರೋನಾ ಸೋಂಕಿಗೆ ಒಳಗಾಗಿ ಗುಣಮುಖರಾಗಿ ಬಂದಿದ್ದಾರೆ. ಇದೀಗ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ಡಿಕೆ ಸುರೇಶ್ ಅವರು, ಕೊರೋನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ. ಈಗಾಗಲೇ ಇವರ ಕುಟುಂಬದ ವಿರುದ್ಧ ನಡೆಯುತ್ತಿರುವ ಸಿಬಿಐ ತನಿಖೆ ಯಾವ ರೂಪ ಪಡೆದುಕೊಳ್ಳಲಿದೆ ಎಂದು ಮುಂದೆ ತಿಳಿಯಲಿದೆ.

- Advertisement -
spot_img

Latest News

error: Content is protected !!