Sunday, May 19, 2024
Homeತಾಜಾ ಸುದ್ದಿಒಕ್ಕಲಿಗರಿಗೆ ಅವಕಾಶ ಒದಗಿ ಬಂದಿದೆ: ಚರ್ಚೆಗೆ ಗ್ರಾಸವಾಗುತ್ತಿದೆ ಡಿಕೆಶಿ ಹೇಳಿಕೆ: ಸಿಎಂ ಅಭ್ಯರ್ಥಿ ನಾನೇ ಎಂಬ...

ಒಕ್ಕಲಿಗರಿಗೆ ಅವಕಾಶ ಒದಗಿ ಬಂದಿದೆ: ಚರ್ಚೆಗೆ ಗ್ರಾಸವಾಗುತ್ತಿದೆ ಡಿಕೆಶಿ ಹೇಳಿಕೆ: ಸಿಎಂ ಅಭ್ಯರ್ಥಿ ನಾನೇ ಎಂಬ ಸುಳಿವು ಕೊಟ್ಟರೇ ಡಿಕೆಶಿ?

spot_img
- Advertisement -
- Advertisement -

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಯಾರು ಎಂಬ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಒಕ್ಕಲಿಗರ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಡಿರುವ ಮಾರ್ಮಿಕ ಮಾತುಗಳು ಇದೀಗ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.

ಎಸ್‌ ಎಂ ಕೃಷ್ಣ ಅವರ ನಂತರ ಒಕ್ಕಲಿಗ ಸಮುದಾಯದ ವ್ಯಕ್ತಿಯೊಬ್ಬರು ರಾಜ್ಯದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶ ಒದಗಿ ಬಂದಿದೆ. ಮುಂದಿನ ಚುನಾವಣೆಯಲ್ಲಿ ಸಮುದಾಯವು ಈ ಅವಕಾಶ ತಪ್ಪಿಸಿಕೊಳ್ಳಬಾರದು’ ಎಂದು ಹೇಳಿದ್ದಾರೆ.

ಐಎಎಸ್‌, ಐಎಫ್‌ಎಸ್‌, ಕೆಎಎಸ್‌ ಮತ್ತಿತರ ಹುದ್ದೆಗಳಿಗೆ ಆಯ್ಕೆಯಾಗಿರುವ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳನ್ನು ಅಭಿನಂದಿಸಲು ಒಕ್ಕಲಿಗರ ಸಂಘದ ಕೇಂದ್ರ ಕಚೇರಿ ಆವರಣದಲ್ಲಿ ಚುಂಚಶ್ರೀ ಬಳಗವು ಭಾನುವಾರ ಆಯೋಜನೆ ಮಾಡಿದ್ದ ಸಮಾರಂಭದಲ್ಲಿ ಮಾತನಾಡಿದ್ದ ಅವರು, ತಾವೂ ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿ ಎಂಬ ಸಂದೇಶವನ್ನು ರವಾನಿಸುವ ಪ್ರಯತ್ನ ನಡೆಸಿದ್ದಾರೆ

ಡಿಕೆ ಶಿವಕುಮಾರ್ ನೀಡಿರುವ ಈ ಹೇಳಿಕೆ ಇದೀಗ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಕಾಂಗ್ರೆಸ್‌ನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಾನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಡಿಕೆಶಿ ಈ ರೀತಿಯಲ್ಲಿ ಹೇಳಿಕೆಯನ್ನು ನೀಡಿರುವುದು ಹಲವು ರೀತಿಯ ಅನುಮಾನಗಳನ್ನು ಹುಟ್ಟುಹಾಕಿದೆ.

ಕಾಂಗ್ರೆಸ್‌ನಲ್ಲಿ ಈಗಾಗಲೇ ಸಿದ್ದರಾಮಯ್ಯ ಅವರ ಪರವಾಗಿ ಅವರ ಅಭಿಮಾನಿಗಳು ಸದ್ದು ಮಾಡುತ್ತಿದ್ದಾರೆ. ಸಿದ್ದರಾಮೋತ್ಸವ ಕಾರ್ಯಕ್ರಮದ ಕುರಿತಾಗಿ ಪರ ಹಾಗೂ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಸಿಎಂ ಅಭ್ಯರ್ಥಿಯನ್ನಾಗಿ ಸಿದ್ದರಾಮಯ್ಯ ಅವರನ್ನು ಬಿಂಬಿಸುವ ಪ್ರಯತ್ನವಾಗಿಯೇ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂಬ ವ್ಯಾಖ್ಯಾನವನ್ನು ಡಿಕೆ ಬಣ ಮಾಡುತ್ತಿದೆ.

ಸಿದ್ದರಾಮೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲೂ ಸಂಸದ ಡಿಕೆ ಸುರೇಶ್ ಅವರು ಪರೋಕ್ಷವಾಗಿ ಸಿದ್ದರಾಮೋತ್ಸವದ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕಾರ್ಯಕ್ರಮ ಯಾರನ್ನು ಬಿಂಬಿಸುವ ಕಾರ್ಯಕ್ರಮ ಆಗಬಾರದು ಎಂದು ಹೇಳಿಕೆ ಕೊಟ್ಟಿದ್ದರು. ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರಿಗೆ ಇಷ್ಟ ಇದೆಯೋ ಇಲ್ಲವೋ ಗೊತ್ತಿಲ್ಲ, ಹಾಗಿದ್ದರೂ ಕೆಲವರು ಅವರ ವ್ಯಕ್ತಿ ಪೂಜೆ ಮಾಡುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದರು.

- Advertisement -
spot_img

Latest News

error: Content is protected !!