ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯ, ಹಿರಿಯ ಪತ್ರಕರ್ತ, ಸಂಘಟಕ, ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಇಂದು ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಮೃತರು ತಾಯಿ, ಪತ್ನಿ, ಒಂದು ಹೆಣ್ಣು, ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ. ಮುಂಗಾರು, ಮಂಗಳೂರು ಮಿತ್ರ, ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ವಿವಿಧ ಪತ್ರಿಕೆಗಳಿಗೆ ಲೇಖನವನ್ನು ಬರೆಯುತ್ತಿದ್ದರು. ಉಜಿರೆಯಲ್ಲಿ ನಡೆದ ವಿಶ್ವ ತುಳು ಸಾಹಿತ್ಯ ಸಮ್ಮೇಳನದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಅವರನ್ನು ಡಾ. ಹೆಗ್ಗಡೆಯವರು ಪುರಸ್ಕರಿಸಿದ್ದಲ್ಲದೆ ಹಲವಾರು ಸನ್ಮಾನಕ್ಕೆ ಪಾತ್ರರಾಗಿದ್ದರು.
ಈತ್ತೀಚೆಗಷ್ಟೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಅವರ ನಿವಾಸದಲ್ಲಿಯೇ “ಚಾವಡಿ ಪುರಸ್ಕಾರ” ನೀಡಿ ಗೌರವಿಸಲಾಗಿತ್ತು. ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಬಂಟ್ವಾಳ ತಾಲೂಕು ಕುಲಾಲ ಸಮಾಜ ಸುಧಾರಕ ಸಂಘದಲ್ಲಿಯು ಸಕ್ರೀಯ ಸದಸ್ಯ, ಪದಾಧಿಕಾರಿಯಾಗಿಯು ಕಾರ್ಯನಿರ್ವಹಿಸಿದ್ದು, ಮಾಣಿಲ ಶ್ರೀಧಾಮದ ಸೇವಾ ಸಮಿತಿಯಲ್ಲು ಸಕ್ರೀಯವಾಗಿದ್ದರು. ಕುಲಾಲ ಮಠ ಕುಂಭೋಧರಿ ದೇವಿ ಟ್ರಸ್ಟ್ ನ ಸ್ಥಾಪಕರು ಆಗಿದ್ದರಲ್ಲದೆ ಕಾಂಗ್ರೆಸ್ ಪಕ್ಷದಲ್ಲು ಕಾರ್ಯಕರ್ತರಾಗಿ ಕೆಲ ಸಮಯಗಳ ಕಾಲ ಗುರುತಿಸಿದ್ದರು.
ವರದಿ: ಪುನೀತ್ ಬಂಟ್ವಾಳ