Monday, June 8, 2026
Homeಕರಾವಳಿಕೊಲೆಯಾದ ಯುವಕರ ಕುಟುಂಬಕ್ಕೆ ಪರಿಹಾರ ನೀಡುವಾಗ ತಾರತಮ್ಯ ಮಾಡಬೇಡಿ: ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ...

ಕೊಲೆಯಾದ ಯುವಕರ ಕುಟುಂಬಕ್ಕೆ ಪರಿಹಾರ ನೀಡುವಾಗ ತಾರತಮ್ಯ ಮಾಡಬೇಡಿ: ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಹೇಳಿಕೆ

- Advertisement -
- Advertisement -

ಬೆಂಗಳೂರು; ಕೊಲೆಯಾದ ಯುವಕರ ಕುಟುಂಬಕ್ಕೆ ಪರಿಹಾರ ನೀಡುವ ವಿಷಯದಲ್ಲಿ ತಾರತಮ್ಯ ಮಾಡಬೇಡಿ ಎಂದು ಸರ್ಕಾರಕ್ಕೆ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಆಗ್ರಹಿಸಿದ್ದಾರೆ.

ಎಲ್ಲರೂ ಜೀವಿಗಳು, ಪ್ರಾಣ ಕಳೆದುಕೊಂಡವರೆಲ್ಲ ಸಮಾನರು. ಎಲ್ಲರಿಗೂ ಸೂಕ್ತ ರೀತಿಯ ಪರಿಹಾರ ನೀಡಬೇಕು ಎಂದು ಶ್ರೀಗಳು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಯಾವುದೇ ರಾಜ್ಯದಲ್ಲಿ ಹತ್ಯೆಯಾದ ವ್ಯಕ್ತಿಯ ಕುಟುಂಬಕ್ಕೆ ಹಣ ನೀಡುವುದು ಪರ್ಯಾಯವಲ್ಲ. ಜೀವ ಮತ್ತು ಹಣ ಎರಡನ್ನೂ ತುಲನೆ ಮಾಡಬಾರದು ಎಂದು ಹೇಳಿದರು.

ಮೊದಲು ಇಂತಹ ಅನಾಹುತಗಳು ನಡೆಯದಂತೆ ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯ.ಯಾವುದೇ ದೇಶ ಪ್ರಗತಿಯಾಗಲು ಶಾಂತಿ, ಸೌಹಾರ್ದತೆ ಇರಲೇಬೇಕು. ಯಾವುದೇ ಸಮುದಾಯ ಇನ್ನೊಂದು ಸಮುದಾಯದ ಮೇಲೆ ದಬ್ಬಾಳಿಕೆ ಮಾಡುವುದು, ಅತಿಕ್ರಮಣ ಮಾಡುವುದು ಅಥವಾ ಬೆದರಿಕೆ ಹಾಕುವುದು ಸರಿಯಾದ ಕ್ರಮವಲ್ಲ ಎಂದು ಶ್ರೀಗಳು ಹೇಳಿದ್ದಾರೆ.

- Advertisement -

Latest News

error: Content is protected !!