Sunday, May 12, 2024
Homeಕರಾವಳಿಪದೇ ಪದೇ ಕರೆ ಮಾಡಿ ಲೋನ್ ಕಟ್ಟುವಂತೆ ಒತ್ತಡ ಹಾಕುತ್ತಿದ್ದಾರಾ? : ಆಗಾಗ್ಗೆ ಪೀಡಿಸಿದರೆ ನಮಗೆ...

ಪದೇ ಪದೇ ಕರೆ ಮಾಡಿ ಲೋನ್ ಕಟ್ಟುವಂತೆ ಒತ್ತಡ ಹಾಕುತ್ತಿದ್ದಾರಾ? : ಆಗಾಗ್ಗೆ ಪೀಡಿಸಿದರೆ ನಮಗೆ ಹೇಳಿ ಎಂದ ಮಂಗಳೂರು ಡಿಸಿ

spot_img
- Advertisement -
- Advertisement -

ಮಂಗಳೂರು:  ಲಾಕ್‍ಡೌನ್ ನಿಂದಾಗಿ ಸಾಕಷ್ಟು ಮಂದಿ ಕೆಲಸವಿಲ್ಲದೇ ಮನೆಯಲ್ಲೇ ಕಾಲ ಕಳೆಯುವಂತಾಗಿದೆ. ಹೀಗಿರುವಾಗ ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ನೀಡಿದ್ದಾರೆ.

ಲಾಕ್ ಡೌನ್ ನಿಂದಾಗಿ  ಅನೇಕರಿಗೆ ಪಡೆದಿರುವ ಸಾಲದ ಕಂತು ಮರು ಪಾವತಿಸಲು ಕಷ್ಟ ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಾಲ ನೀಡಿರುವ ಹಣಕಾಸು ಸಂಸ್ಥೆಗಳು, ಫೈನಾನ್ಸ್ ಗಳು, ಮೈಕ್ರೋ ಫೈನಾನ್ಸ್ ಗಳು ಸಾಲದ ಕಂತು ಪಾವತಿಸುವಂತೆ ಒತ್ತಾಯಿಸಬಾರದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಇದರ ಹೊರತಾಗಿಯೂ ಯಾವುದೇ ಸಾಲ ನೀಡಿರುವ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ಮರು ಪಾವತಿಸುವಂತೆ ಒತ್ತಡ ಹೇರಿದ್ದಲ್ಲಿ ಅಂತಹ ಸಂದರ್ಭದಲ್ಲಿ ಆ ಸಂಸ್ಥೆಗಳ ವಿರುದ್ಧ ದೂರು ನೀಡಲು ನೋಡಲ್ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ನೇಮಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಗಳು ಹಾಗೂ ಸಹಕಾರಿ ಸಂಸ್ಥೆಗಳು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಲ್ಲಿ ಅಂತಹ ಸಂದರ್ಭದಲ್ಲಿ ಸಹಕಾರಿ ಸಂಘಗಳ ಉಪ ನಿಬಂಧಕರಾದ ಪ್ರವೀಣ್ ನಾಯಕ್ – 944863338 ಇವರಿಗೆ ದೂರು ನೀಡುವಂತೆ ತಿಳಿಸಲಾಗಿದೆ. ಇನ್ನುಳಿದಂತೆ ಇತರೆ ಸಂಸ್ಥೆಗಳಿಗೆ ಸಂಬಂಧಿಸಿದ ದೂರುಗಳಾದಲ್ಲಿ, ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಪ್ರವೀಣ್ – 9449860916 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!