Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ.ಆದಂ ಅಸೌಖ್ಯದಿಂದ ನಿಧನ

ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ.ಆದಂ ಅಸೌಖ್ಯದಿಂದ ನಿಧನ

- Advertisement -
- Advertisement -

ಬೆಳ್ತಂಗಡಿ : ತಲಪಾಡಿ ಕೆ.ಸಿ ರೋಡ್ ನಿವಾಸಿ ಡಾ! ಆದಂ ಉಸ್ಮಾನ್(65) ಅಲ್ಪಕಾಲದ ಅಸೌಖ್ಯದಿಂದ ಎ.20 ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.

ಪುತ್ತೂರು,ಕಡಬ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಸುಮಾರು 14 ವರ್ಷಗಳ ಕಾಲ ಸರಕಾರಿ ಸೇವೆ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದರು.

ಮೃತದೇಹ ತಮ್ಮ ಮನೆಯಾದ ಕೆ.ಸಿ.ರೋಡ್ ಮಂಗಳೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.ಮೃತರ ಅಂತ್ಯ ಕ್ರಿಯೆ ಎ.21 (ನಾಳೆ) ಬೆಳಗ್ಗೆ 5.30 ಕ್ಕೆ ತಮ್ಮ ಸ್ವಂತ ಊರಾದ ಕಡಬಕ್ಕೆ ಮೃತದೇಹವನ್ನು ಸಾಗಿಸುವುದಾಗಿ ತಮ್ಮ ಕುಂಟುಬ ಸದಸ್ಯರು ತೀರ್ಮಾನಿಸಿದ್ದಾರೆ.ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

- Advertisement -

Latest News

error: Content is protected !!