Sunday, June 14, 2026
Homeಕರಾವಳಿಸುಳ್ಯ; ಯುವ ವೈದ್ಯ ನೇಣಿಗೆ ಶರಣು

ಸುಳ್ಯ; ಯುವ ವೈದ್ಯ ನೇಣಿಗೆ ಶರಣು

- Advertisement -
- Advertisement -

ಸುಳ್ಯ: ಇಲ್ಲಿನ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪದ ನೀರ್ಚಾಲಿನಲ್ಲಿ ನಡೆದಿದೆ. ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೋ ಉದ್ಯೋಗಿ ಗೋಪಾಲಕೃಷ್ಣ ಭಟ್‌ ಅವರ ಪುತ್ರಿ ಯುವ ವೈದ್ಯೆ ಡಾ. ಪಲ್ಲವಿ ಜಿ.ಕೆ. (25) ಆತ್ಮಹತ್ಯೆಗೆ ಶರಣಾದವರು.

ಪಲ್ಲವಿ ಜೂ. 5ರಂದು(ಮೊನ್ನೆ) ರಾತ್ರಿ ಊಟ ಮಾಡಿ ನಿದ್ದೆ ಮಾಡಿದ್ದ ಪಲ್ಲವಿ ನಿನ್ನೆ ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ ಬಾಗಿಲು ತೆರೆದು ನೋಡಿದಾಗ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ.

ಧಾರವಾಡದ ಎಸ್‌ಡಿಎಂ ಕಾಲೇಜಿನಲ್ಲಿ ಎಂಬಿಬಿಎಸ್‌ ಕೋರ್ಸ್‌ ಪೂರ್ತಿಗೊಳಿಸಿದ ಬಳಿಕ ಪಲ್ಲವಿ ರೂರಲ್‌ ಸರ್ವೀಸ್‌ನ ಅಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ನೇಮಕಗೊಂಡಿದ್ದರು. ಬಳಿಕ ಎಂ.ಡಿ. ಕೋರ್ಸ್‌ನ ಪರೀಕ್ಷೆ ಬರೆಯಲು ಅಲ್ಲಿಂದ ರಜೆಯಲ್ಲಿ ತೆರಳಿದ್ದರು. ಪರೀಕ್ಷೆಯ ಬಳಿಕ ಮನೆಗೆ ಬಂದಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬದಿಯಡ್ಕ ಪೊಲೀಸರು ಮೃತದೇಹದ ಮಹಜರು ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!