Friday, June 5, 2026
Homeಕರಾವಳಿದೇರಳಕಟ್ಟೆಯ ಜಸ್ಟೀಸ್‌ ಕೆ.ಎಸ್‌. ಹೆಗ್ಡೆ ಆಸ್ಪತ್ರೆಯ ವೈದ್ಯ ಡಾ| ಜಯರಾಮ ಶೆಟ್ಟಿ ನಿಧನ

ದೇರಳಕಟ್ಟೆಯ ಜಸ್ಟೀಸ್‌ ಕೆ.ಎಸ್‌. ಹೆಗ್ಡೆ ಆಸ್ಪತ್ರೆಯ ವೈದ್ಯ ಡಾ| ಜಯರಾಮ ಶೆಟ್ಟಿ ನಿಧನ

- Advertisement -
- Advertisement -

ಮಂಗಳೂರು : ದೇರಳಕಟ್ಟೆಯ ಜಸ್ಟೀಸ್‌ ಕೆ.ಎಸ್‌. ಹೆಗ್ಡೆ ಚಾರಿಟೇಬಲ್‌ ಆಸ್ಪತ್ರೆಯ ರೇಡಿಯೇಷನ್‌ ಆಂಕಾಲಜಿ ವಿಭಾಗದ ತಜ್ಞ ವೈದ್ಯಗುರುಪುರ ಡಾ| ಜಯರಾಮ ಶೆಟ್ಟಿ(53) ಹೃದಯಾಘಾತದಿಂದ ಜ.,11ರಂದು ಬುಧವಾರ ಮಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ಮಂಗಳೂರಿನ ಕೆ.ಎಂಸಿ ವೈದ್ಯಕೀಯ ಕಾಲೇಜಿನಲ್ಲಿ ರೇಡಿಯೇಷನ್‌ ಆಂಕಾಲಜಿ ವಿಷಯದಲ್ಲಿ ಸ್ನಾತಕೋತ್ತರ ಉನ್ನತ ಶಿಕ್ಷಣ ಪಡೆದ ಬಳಿಕ ಸುಮಾರು ಒಂದು ದಶಕಕ್ಕಿಂತ ಹೆಚ್ಚು ಕಾಲ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ಬಳಿಕ ಕಳೆದ 11 ವರುಷಗಳಿಂದ ದೇರಳಕಟ್ಟೆಯ ಜಸ್ಟೀಸ್‌ ಕೆ.ಎಸ್‌. ಹೆಗ್ಡೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಸಂಜೆಯವರೆಗೆ ಕಾರ್ಯ ನಿರ್ವಹಿಸಿ ಮನೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!