Tuesday, July 1, 2025
Homeಕರಾವಳಿಕಾಸರಗೋಡುಕಾಸರಗೋಡಿನಲ್ಲಿ ಶವರ್ಮಾ ಸೇವಿಸಿ ವಿದ್ಯಾರ್ಥಿನಿ ಸಾವು ಪ್ರಕರಣ: ಸಾವಿಗೆ ಶಿಗಲ್ಲಾ ಬ್ಯಾಕ್ಟೀರಿಯಾ ಕಾರಣವೆಂದ ಆರೋಗ್ಯಾಧಿಕಾರಿ

ಕಾಸರಗೋಡಿನಲ್ಲಿ ಶವರ್ಮಾ ಸೇವಿಸಿ ವಿದ್ಯಾರ್ಥಿನಿ ಸಾವು ಪ್ರಕರಣ: ಸಾವಿಗೆ ಶಿಗಲ್ಲಾ ಬ್ಯಾಕ್ಟೀರಿಯಾ ಕಾರಣವೆಂದ ಆರೋಗ್ಯಾಧಿಕಾರಿ

spot_img
- Advertisement -
- Advertisement -

ಕಾಸರಗೋಡು: ಇಲ್ಲಿನ ಚೆರ್ವತ್ತೂರಿನ ಕೂಲ್‌ಬಾರ್‌ನಲ್ಲಿ ಶವರ್ಮಾ ಸೇವಿಸಿ ಮೃತಪಟ್ಟ ವಿದ್ಯಾರ್ಥಿನಿಯ ಸಾವಿಗೆ ಶಿಗಲ್ಲಾ ಬ್ಯಾಕ್ಟೀರಿಯಾ ಕಾರಣ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ರಾಮದಾಸ್ ಸ್ಪಷ್ಟಪಡಿಸಿದ್ದಾರೆ.

ವಿಷಾಹಾರ ಸೇವನೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿರುವವರ ರಕ್ತ ಮೊದಲಾದವುಗಳ ತಪಾಸಣೆಯಲ್ಲಿ ಶಿಗಲ್ಲಾ ಬ್ಯಾಕ್ಟೀರಿಯಾ ಪತ್ತೆಯಾಗಿದೆ.

ಕೋಜಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಗಿತ್ತು. ಇದರಿಂದ ಶಿಗಲ್ಲಾ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದ್ದು, ಜನರು ಇಂತಹ ಆಹಾರ ಸೇವಿಸುವ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!