Friday, June 5, 2026
Homeಕರಾವಳಿಮಂಗಳೂರುಬಂಟ್ವಾಳ; ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದ ಖ್ಯಾತ ಮನೋವೈದ್ಯರು

ಬಂಟ್ವಾಳ; ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದ ಖ್ಯಾತ ಮನೋವೈದ್ಯರು

- Advertisement -
- Advertisement -

ಬಂಟ್ವಾಳ; ಕುಡಿದ ಮತ್ತಿನಲ್ಲಿ ಖ್ಯಾತ ಮನೋವೈದ್ಯರು ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದ ಘಟನೆ ಫರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.

ವೈದ್ಯರು ಕುಡಿದ ಮತ್ತಿನಲ್ಲಿ ಅತಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ವೈದ್ಯರು ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ನೆರವು ನೀಡಲು ಸ್ಥಳಕ್ಕೆ ಆಗಮಿಸಿದ ಸ್ಥಳೀಯರನ್ನು ಕುಡಿದ ಮತ್ತಿನಲ್ಲಿ ವೈದ್ಯರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪಗಳಿವೆ. ಘಟನೆಯ ವೇಳೆ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡವರಂತೆ ವರ್ತಿಸಿದ ಈ ಮನೋರೋಗ ತಜ್ಞರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡಿದು ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದ ಪ್ರಕರಣವನ್ನು ಮುಚ್ಚಿ ಹಾಕಲು ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ವೈದ್ಯರು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಸಂಬಂಧಿತ ಇಲಾಖೆಯ ಉನ್ನತ ಅಧಿಕಾರಿಗಳಿಗೆ ದೂರು ನೀಡಲು ಸ್ಥಳೀಯರು ನಿರ್ಧರಿಸಿದ್ದಾರೆ.

- Advertisement -

Latest News

error: Content is protected !!