Thursday, June 4, 2026
Homeಕರಾವಳಿಮಂಗಳೂರುಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ; ಮಂಗಳೂರಿನಲ್ಲಿ ಒಪಿಡಿ ಬಂದ್ ಮಾಡಿ ವೈದ್ಯರ...

ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ; ಮಂಗಳೂರಿನಲ್ಲಿ ಒಪಿಡಿ ಬಂದ್ ಮಾಡಿ ವೈದ್ಯರ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಶನಿವಾರ ಮಂಗಳೂರಿನಲ್ಲಿ ಐಎಂಎ ವತಿಯಿಂದ ಮೌನ ಮೆರವಣಿಗೆ ನಡೆಯಿತು.

ವೈದ್ಯರ ಪ್ರತಿಭಟನೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ಕೂಡಾ ಭಾಗವಹಿಸಿದ್ದರು.

ವೈದ್ಯರು, ವೈದ್ಯಕೀಯ‌ ಸಿಬ್ಬಂದಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಬಳಿಗೆ ತೆರಳಲು ಪ್ರತಿಭಟನಾಕಾರರಿಗೆ ಪೊಲೀಸರು ಅನುಮತಿ ನೀಡದ ಕಾರಣ ಪ್ರತಿಭಟನಾ ನಿರತ ವೈದ್ಯರು ಹಾಗು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಿದರು.ಇದೇ ವೇಳೆ ಎಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ಒಪಿಡಿ ಸೇವೆಗಳು ಬಂದ್ ಮಾಡಿ ಕೂಡಾ ಪ್ರತಿಭಟನೆ ನಡೆಯಿತು.ನಂತರ ಸಂಜೆ ಸಂಸದರು ಮತ್ತು ಶಾಸಕರ ನೇತೃತ್ವದಲ್ಲಿ ಮೊಂಬತ್ತಿ ಬೆಳಗಿ ಕೂಡಾ ಪ್ರತಿಭಟನೆ ನಡೆಯಿತು‌.

- Advertisement -

Latest News

error: Content is protected !!